ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್ ಬೆಂಕಿ ದುರಂತ
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ ನಗರದಲ್ಲಿ ಬಸ್‌ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದ ಬಳಿಕ ಹತ್ತಾರು ಪ್ರಯಾಣಿಕರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಿಂದ ಹೊಗೆ ಹರಡುತ್ತಿದೆ.
ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಭಾರೀ ದುರಂತವೊಂದು ತಪ್ಪಿದೆ. ಬಸ್‌ಗೆ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ