Video: ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಮಹಿಳೆ

Updated on: Oct 22, 2025 | 7:47 AM

ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾದಲ್ಲಿರುವ ಅಪಾರ್ಟ್​ಮೆಂಟ್​​ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಆವರಣದ ಹೊರಗೆ ಎಳೆದುಕೊಂಡು ಹೋಗಿ ಪದೇ ಪದೇ ಕಪಾಳಮೋಕ್ಷ ಮಾಡಿದ ಆಘಾತಕಾರಿ ಘಟನೆ ನಡೆದಿದೆ.ಅಕ್ಟೋಬರ್ 18 ರಂದು ನಡೆದ ಈ ವಾಗ್ವಾದವನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ, ಸಿಬ್ಬಂದಿ ದೂರು ದಾಖಲಿಸಿದ್ದು, ದಂಕೌರ್ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ನೋಯ್ಡಾ, ಅಕ್ಟೋಬರ್ 22: ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾದಲ್ಲಿರುವ ಅಪಾರ್ಟ್​ಮೆಂಟ್​​ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಆವರಣದ ಹೊರಗೆ ಎಳೆದುಕೊಂಡು ಹೋಗಿ ಪದೇ ಪದೇ ಕಪಾಳಮೋಕ್ಷ ಮಾಡಿದ ಆಘಾತಕಾರಿ ಘಟನೆ ನಡೆದಿದೆ.ಅಕ್ಟೋಬರ್ 18 ರಂದು ನಡೆದ ಈ ವಾಗ್ವಾದವನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ, ಸಿಬ್ಬಂದಿ ದೂರು ದಾಖಲಿಸಿದ್ದು, ದಂಕೌರ್ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More