ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಧರ್ಮದೇಟು; ವಿಡಿಯೋ ವೈರಲ್
ದೆಹಲಿ ಮೆಟ್ರೋದಲ್ಲಿ ಪರ್ಸ್ ಕದಿಯಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಪ್ರಯಾಣಿಕರು ಥಳಿಸಿದ್ದಾರೆ. ಈ ವೀಡಿಯೊ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳಲಾದ ವೈರಲ್ ವೀಡಿಯೊಗಳಿಂದ ದೆಹಲಿ ನಗರದ ಮೆಟ್ರೋದಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು.
ನವದೆಹಲಿ: ನವದೆಹಲಿಯಲ್ಲಿ ಮೆಟ್ರೋದಲ್ಲಿ ಸಂಚರಿಸುವಾಗ ಪ್ರಯಾಣಿಕರ ಪರ್ಸ್ ಕದಿಯಲು ಹೋಗಿ ಕಳ್ಳನೊಬ್ಬ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಪ್ರಯಾಣಿಕರೇ ಆತನಿಗೆ ಮನಬಂದಂತೆ ಥಳಿಸಿ ಬುದ್ಧಿ ಕಲಿಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರಯಾಣಿಕನೊಬ್ಬ ಪರ್ಸ್ ಕದಿಯಲು ಪ್ರಯತ್ನಿಸುವ ವ್ಯಕ್ತಿಯನ್ನು ಥಳಿಸುವುದನ್ನು ನೋಡಬಹುದು.
ಕಾಶ್ಮೀರ್ ಗೇಟ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಕೋಚ್‌ನೊಳಗೆ ವೃದ್ಧರೊಬ್ಬರು ಕಳ್ಳನನ್ನು ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆ ವ್ಯಕ್ತಿ ಪರ್ಸ್ ಅನ್ನು ರೆಡ್ ಹ್ಯಾಂಡ್ ಆಗಿ ಕದಿಯುವಾಗ ಸಿಕ್ಕಿಬಿದ್ದಿದ್ದಾನೆ ಎಂದು ವರದಿಯಾಗಿದೆ. ಕೆಲವು ನೆಟ್ಟಿಗರು ಈ ರೀತಿ ಥಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

