ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಧರ್ಮದೇಟು; ವಿಡಿಯೋ ವೈರಲ್

Updated on: Jul 08, 2024 | 10:14 PM

ದೆಹಲಿ ಮೆಟ್ರೋದಲ್ಲಿ ಪರ್ಸ್ ಕದಿಯಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಪ್ರಯಾಣಿಕರು ಥಳಿಸಿದ್ದಾರೆ. ಈ ವೀಡಿಯೊ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳಲಾದ ವೈರಲ್ ವೀಡಿಯೊಗಳಿಂದ ದೆಹಲಿ ನಗರದ ಮೆಟ್ರೋದಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು.

ನವದೆಹಲಿ: ನವದೆಹಲಿಯಲ್ಲಿ ಮೆಟ್ರೋದಲ್ಲಿ ಸಂಚರಿಸುವಾಗ ಪ್ರಯಾಣಿಕರ ಪರ್ಸ್ ಕದಿಯಲು ಹೋಗಿ ಕಳ್ಳನೊಬ್ಬ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಪ್ರಯಾಣಿಕರೇ ಆತನಿಗೆ ಮನಬಂದಂತೆ ಥಳಿಸಿ ಬುದ್ಧಿ ಕಲಿಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರಯಾಣಿಕನೊಬ್ಬ ಪರ್ಸ್ ಕದಿಯಲು ಪ್ರಯತ್ನಿಸುವ ವ್ಯಕ್ತಿಯನ್ನು ಥಳಿಸುವುದನ್ನು ನೋಡಬಹುದು.

ಕಾಶ್ಮೀರ್ ಗೇಟ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಕೋಚ್‌ನೊಳಗೆ ವೃದ್ಧರೊಬ್ಬರು ಕಳ್ಳನನ್ನು ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆ ವ್ಯಕ್ತಿ ಪರ್ಸ್ ಅನ್ನು ರೆಡ್ ಹ್ಯಾಂಡ್ ಆಗಿ ಕದಿಯುವಾಗ ಸಿಕ್ಕಿಬಿದ್ದಿದ್ದಾನೆ ಎಂದು ವರದಿಯಾಗಿದೆ. ಕೆಲವು ನೆಟ್ಟಿಗರು ಈ ರೀತಿ ಥಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More