ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ
ವೇಗವಾಗಿ ಬಂದ ಬಿಳಿ ಬಣ್ಣದ ವ್ಯಾಗನ್‌ಆರ್ ಕಾರು ರಸ್ತೆ ಬದಿಯಲ್ಲಿ ಕುಳಿತಿದ್ದ ಮೂವರು ಮಕ್ಕಳಿಗೆ ಡಿಕ್ಕಿ ಹೊಡೆದು ಆ ಸ್ಥಳದಿಂದ ಪರಾರಿಯಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಭೀಕರ ಅಪಘಾತದಲ್ಲಿ ಒಬ್ಬ ಬಾಲಕ ಪ್ರಾಣ ಕಳೆದುಕೊಂಡಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಫರೂಕಾಬಾದ್: ವೇಗವಾಗಿ ಬಂದ ಕಾರು ಮೂರು ಮಕ್ಕಳಿಗೆ ಡಿಕ್ಕಿ ಹೊಡೆದು, ಅವರನ್ನು ಎಳೆದೊಯ್ದಿದೆ. ಅಪಘಾತದಲ್ಲಿ ಅವರಲ್ಲಿ ಒಬ್ಬರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೇಗವಾಗಿ ಬಂದ ಬಿಳಿ ಬಣ್ಣದ ವ್ಯಾಗನ್‌ಆರ್ ರಸ್ತೆ ಬದಿಯಲ್ಲಿ ಕುಳಿತಿದ್ದ ಮೂವರು ಅಪ್ರಾಪ್ತ ಮಕ್ಕಳಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ