ಕರ್ನಾಟಕ ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಯುವಕರಿಬ್ಬರು ರಾಜಾರೋಷವಾಗಿ ಗಾಂಜಾ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ರೈಲು ಸಂಖ್ಯೆ 12650ರಲ್ಲಿ ರಾತ್ರಿ ವೇಳೆ ನಡೆದ ಈ ಘಟನೆಯಿಂದ ಸಹಪ್ರಯಾಣಿಕರು ಆತಂಕಗೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರೈಲ್ವೆ ಪೊಲೀಸರಿಗೆ ಒತ್ತಾಯಿಸಿದ್ದಾರೆ. ವಿಡಿಯೋ ಇಲ್ಲಿದೆ.
ಹುಬ್ಬಳ್ಳಿ, ಏಪ್ರಿಲ್ 10: ಹಜರತ್ ನಿಜಾಮುದ್ದೀನ್ ಹಾಗೂ ಯಶವಂತಪುರ ಮಧ್ಯೆ ಸಂಚರಿಸುವ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12650) ರೈಲಿನಲ್ಲಿ ಯುವಕರಿಬ್ಬರು ಬಹಿರಂಗವಾಗಿ ಗಾಂಜಾ ಸೇವನೆ ಮಾಡಿದ್ದಾರೆ. ರಾತ್ರಿ ಪ್ರಯಾಣದ ವೇಳೆ ಸಿಗರೇಟ್‌ನಲ್ಲಿ ಗಾಂಜಾ ಸೇರಿಸಿ ಸೇದುತ್ತಾ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದಾರೆ. ಸಾರ್ವಜನಿಕರ ಭಯವಿಲ್ಲದೆ ಅಟ್ಟಹಾಸ ಮೆರೆದ ಈ ಯುವಕರ ಕೃತ್ಯವನ್ನು ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ. ರೈಲ್ವೆ ಪೊಲೀಸರು ಇವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Follow Us
Latest Videos
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ

