Viral Video: ತಿನಿಸು ಕೊಡುವಂತೆ ಕೈ ಚಾಚಿದ ದೈವಕ್ಕೆ ಮಗು ಮಾಡಿದ್ದೇನು? ಮುಗ್ಧತೆಗೆ ತಲೆದೂಗಿದ ದೈವ
ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು.
ಮಂಗಳೂರು: ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು. ಈ ವೇಳೆ ಅಲ್ಲಿಯೇ ನೆಲದಲ್ಲಿ ಕುಳಿತು ಮಗುವೊಂದು ಸ್ವೀಟ್ ಕಾರ್ನ್ ತಿನ್ನುತ್ತಾ ನೇಮ ವೀಕ್ಷಿಸುತಿತ್ತು. ಈ ಮಗುವನ್ನು ಕಂಡು ಅಲ್ಲಿಗೆ ಬಂದ ಕಾಂತೇರಿ ಜುಮಾದಿ ದೈವ ತನಗೂ ತಿನಿಸು ಕೊಡುವಂತೆ ಕೈ ಚಾಚಿದೆ. ದೈವ ತನ್ನಲ್ಲಿಗೆ ಬಂದಾಗ ಕೊಂಚವೂ ಭೀತಿಗೊಳಗಾಗದ ಮಗು ಮುಗ್ಧತೆಯಿಂದ ಚಮಚದಲ್ಲಿ ಸ್ವೀಟ್ ಕಾರ್ನ್ ನೀಡಲು ಯತ್ನಿಸಿದೆ. ಈ ಸಂದರ್ಭ ಮಗುವಿನ ಮುಗ್ಧತೆಗೆ ತಲೆದೂಗಿದ ದೈವ ತನ್ನ ಹಣೆಯ ಬಣ್ಣವನ್ನೇ ಆರ್ಶೀವಾದ ರೂಪದಲ್ಲಿ ಮಗುವಿನ ಹಣೆಗೆ ತಿಲಕವಿರಿಸಿದೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

