GT vs RCB: 4,4,4,4,4.. ಒಂದೇ ಓವರ್ನಲ್ಲಿ 5 ಬೌಂಡರಿ ಬಾರಿಸಿದ ಕೊಹ್ಲಿ
Virat Kohli 5 boundaries: ಐಪಿಎಲ್ 2026ರ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಹಮದಾಬಾದ್‌ನಲ್ಲಿ ಆಡಿತು. ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ, ರಬಾಡ ಬೌಲ್ ಮಾಡಿದ 2ನೇ ಓವರ್‌ನ ಮೊದಲ ಐದು ಎಸೆತಗಳಲ್ಲಿ ಸತತ 5 ಬೌಂಡರಿಗಳನ್ನು ಸಿಡಿಸಿ ಸ್ಫೋಟಕ ಆರಂಭ ನೀಡಿದರು. ಆದಾಗ್ಯೂ, ಕೊಹ್ಲಿ 13 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು.
ಐಪಿಎಲ್ 2026 ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿಗೆ ಮೊದಲ ಎರಡು ಓವರ್ಗಳಲ್ಲಿ ಸ್ಫೋಟಕ ಆರಂಭ ಸಿಕ್ಕಿತು. ಅದರಲ್ಲೂ ರಬಾಡ ಬೌಲ್ ಮಾಡಿದ 2ನೇ ಓವರ್ನಲ್ಲಿ ವಿರಾಟ್ ಕೊಹ್ಲಿ ಬೌಂಡರಿಗಳ ಮಳೆಗರೆದರು.
ಈ ಪಂದ್ಯದಲ್ಲಿ ಆರ್ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಬೆಥೆಲ್ ಇನ್ನಿಂಗ್ಸ್ ಆರಂಭಿಸಿದರು. ಗುಜರಾತ್ ಪರ ಸಿರಾಜ್ ಎಸೆದ ಮೊದಲ ಓವರ್ನಲ್ಲಿ 1 ಬೌಂಡರಿ ಸಹಿತ 6 ರನ್ಗಳು ಬಂದವು. ಎರಡನೇ ಓವರ್ನಲ್ಲಿ ಸ್ಟ್ರೇಕ್ಗೆ ಬಂದ ವಿರಾಟ್ ಕೊಹ್ಲಿ, ರಬಾಡ ಬೌಲ್ ಮಾಡಿದ ಎರಡನೇ ಓವರ್‌ನ ಮೊದಲ ಐದು ಎಸೆತಗಳಲ್ಲಿ ಸತತ ಐದು ಬೌಂಡರಿಗಳನ್ನು ಬಾರಿಸಿದರು. ಈ ಮೂಲಕ ಸತತ 5 ಎಸೆತಗಳಲ್ಲಿ ಐದು ಬೌಂಡರಿಗಳನ್ನು ಬಾರಿಸಿದ ಕೆಲವೇ ಕೆಲವು ಆಟಗಾರರ ಪಟ್ಟಿಗೆ ಕೊಹ್ಲಿಯೂ ಸೇರಿಕೊಂಡರು.
ಆದಾಗ್ಯೂ ಈ ಪಂದ್ಯದಲ್ಲಿ ಕೊಹ್ಲಿಗೆ ಹೆಚ್ಚಿನದನ್ನು ಮಾಡಲು ಸಾಧ್ಯವಾಗಲಿಲ್ಲ. ರಬಾಡ ಬೌಲ್ ಮಾಡಿದ ಇನ್ನಿಂಗ್ಸ್ನ 4ನೇ ಓವರ್ನಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. ಕೊಹ್ಲಿ 13 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 28 ರನ್ ಬಾರಿಸಿ ಔಟಾದರು.