ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

Updated on: May 25, 2025 | 1:58 PM

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 13 ಪಂದ್ಯಗಳಲ್ಲಿ 8 ಜಯಗಳಿಸಿರುವ ಆರ್​ಸಿಬಿ ಪಡೆ ಒಟ್ಟು 17 ಅಂಕಗಳನ್ನು ಕಲೆಹಾಕಿದೆ. ಇನ್ನು ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಒಂದು ಪಂದ್ಯವಾಡಬೇಕಿದ್ದು, ಇದಾದ ಬಳಿಕ ಪ್ಲೇಆಫ್ ಮ್ಯಾಚ್​ಗಳು ಶುರುವಾಗಲಿದೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕುಟುಂಬ ಸಮೇತ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಪತ್ನಿ ಅನುಷ್ಕಾ ಶರ್ಮಾ ಜೊತೆ ಭಾನುವಾರ ಅಯೋಧ್ಯಾ ಧಾಮ್​ಗೆ ಆಗಮಿಸಿದ ಕೊಹ್ಲಿ ರಾಮ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಆ ಬಳಿಕ ಅಯೋಧ್ಯೆಯಲ್ಲಿರುವ ಹನುಮಾನಗಡಿಗೂ ಭೇಟಿ ನೀಡಿ ಪ್ರಾರ್ಥಿಸಿದರು.

ವಿರಾಟ್ ಕೊಹ್ಲಿ ಸದ್ಯ ಲಕ್ನೋದಲ್ಲಿದ್ದು, ಹೀಗಾಗಿ ಬಿಡುವಿನ ವೇಳೆ ದೇವರ ದರ್ಶನಕ್ಕೆ ತೆರಳಿದ್ದಾರೆ. ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಕೊನೆಯ ಲೀಗ್​ ಮ್ಯಾಚ್​ನಲ್ಲಿ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಥವಾ ದ್ವಿತೀಯ ಸ್ಥಾನಕ್ಕೇರುವ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವು ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

 

Published on: May 25, 2025 01:57 PM