VIDEO: ಅನುಷ್ಕಾ… ಇನ್ನೊಂದು ಗೆಲುವು ಅಷ್ಟೇ..!
IPL 2025: ಐಪಿಎಲ್ ಪ್ಲೇಆಫ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಮುಲ್ಲನ್ಪುರ್ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 101 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಆರ್ಸಿಬಿ 10 ಓವರ್ಗಳಲ್ಲಿ ಚೇಸ್ ಮಾಡಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಫೈನಲ್ಗೆ ಲಗ್ಗೆಯಿಟ್ಟಿದೆ. ಮುಲ್ಲನ್ಪುರ್ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್ಗಳಿಂದ ಮಣಿಸಿ ಆರ್ಸಿಬಿ ಫೈನಲ್ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 14.1 ಓವರ್ಗಳಲ್ಲಿ 101 ರನ್ಗಳಿಸಿ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಆರ್ಸಿಬಿ ತಂಡ 10 ಓವರ್ಗಳಲ್ಲಿ ಚೇಸ್ ಮಾಡಿದೆ.
ಈ ಗೆಲುವಿನ ಬಳಿಕ ಆರ್ಸಿಬಿ ಆಟಗಾರರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಈ ಸಂಭ್ರಮದ ನಡುವೆಯು ವಿರಾಟ್ ಕೊಹ್ಲಿ ತಮ್ಮ ಪ್ರೀತಿಯ ಪತ್ನಿಯ ಜೊತೆ ಸಂತಸ ಹಂಚಿಕೊಂಡರು. ಅದು ಸಹ ಇನ್ನೊಂದು ಮ್ಯಾಚ್ ಅಷ್ಟೇ ಎನ್ನುವ ಮೂಲಕ ಎಂಬುದು ವಿಶೇಷ.
ಅಂದರೆ ವಿರಾಟ್ ಕೊಹ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ಇನ್ನೊಂದು ಗೆಲುವಿನ ಅವಶ್ಯಕತೆಯಿದೆ. ಜೂನ್ 3 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಫೈನಲ್ ಮ್ಯಾಚ್ನಲ್ಲಿ ಆರ್ಸಿಬಿ ತಂಡ ಗೆದ್ದರೆ, ವಿರಾಟ್ ಕೊಹ್ಲಿಯ 18 ವರ್ಷಗಳ ಕನಸು ನನಸಾಗಲಿದೆ. ಹೀಗಾಗಿಯೇ ಫೈನಲ್ಗೆ ಪ್ರವೇಶಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಇನ್ನೊಂದು ಗೆಲುವು ಅಷ್ಟೇ ಎಂದು ಅನುಷ್ಕಾ ಶರ್ಮಾ ಅವರೊಂದಿಗೆ ಸಂತಸ ಹಂಚಿಕೊಂಡಿದ್ದರು.