IPL 2024: ಚಿನ್ನಸ್ವಾಮಿಯಲ್ಲಿ ಕೊಹ್ಲಿ-ಮ್ಯಾಕ್ಸ್ವೆಲ್ ಭರ್ಜರಿ ಅಭ್ಯಾಸ: ವಿಡಿಯೋ ವೈರಲ್
Virat Kohli-Glenn Maxwell Practice: ಐಪಿಎಲ್ 2024ಕ್ಕಾಗಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ಯಾಂಪ್ಗೆ ಬಂದಿದ್ದು, ಅಭ್ಯಾಸ ಕೂಡ ಆರಂಭಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಆಗಿ ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. ಇದೇ ಮಾರ್ಚ್ 22 ರಂದು ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡಗಳು ಸೆಣೆಸಾಡುವ ಮೂಲಕ ಐಪಿಎಲ್ 2024ಕ್ಕೆ ಚಾಲನೆ ಸಿಗಲಿದೆ. ಈಗಾಗಲೇ ಎಲ್ಲ ಆಟಗಾರರು ತಮ್ಮ ತಮ್ಮ ಫ್ರಾಂಚೈಸಿ ಸೇರಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಕೂಡ ಆರ್ಸಿಬಿ ಕ್ಯಾಂಪ್ಗೆ ಬಂದಿದ್ದು, ಅಭ್ಯಾಸ ಕೂಡ ಆರಂಭಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಆಗಿ ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂದು ಆರ್ಸಿಬಿ ಅನ್ಬಾಕ್ಸ್ ಈಟೆಂಟ್ ಕೂಡ ನಡೆಯಲಿದೆ. ಇದರಲ್ಲಿ ತಂಡದ ಸ್ಟಾರ್ ಆಟಗಾರರು ಹಾಜರಿರಲಿದ್ದಾರೆ. ಹಾಗೆಯೆ ಆರ್ಸಿಬಿ ಮಹಿಳಾ ತಂಡ ಕೂಡ ಭಾಗವಹಿಸಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ