AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ

VIDEO: ಮೊದಲು ಕಿತ್ತಾಟ… ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ

ಝಾಹಿರ್ ಯೂಸುಫ್
|

Updated on: Apr 21, 2025 | 2:04 PM

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 37ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 157 ರನ್ ಕಲೆಹಾಕಿದರೆ, ಈ ಗುರಿಯನ್ನು ಆರ್​ಸಿಬಿ 18.5 ಓವರ್​ಗಳಲ್ಲಿ ಚೇಸ್ ಮಾಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 37ನೇ ಪಂದ್ಯವು ಆಟಕ್ಕಿಂತ ಆಟಗಾರರ ನಡುವಣ ಕಿತ್ತಾಟದಿಂದ ಸಖತ್ ಸುದ್ದಿಯಾಗಿತ್ತು. ಮುಲ್ಲನ್​ಪುರ್​ನ ಎಂವೈಎಸ್ ಸ್ಟೇಡಿಯಂನಲ್ಲಿ ನಡೆದ  ಪಂದ್ಯದ ನಡುವೆ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ನರ್ ಹರ್​​ಪ್ರೀತ್ ಬ್ರಾರ್ ಹಾಗೂ ವಿರಾಟ್ ಕೊಹ್ಲಿ (Virat Kohli) ಮಾತಿನ ಚಕಮಕಿ ನಡೆಸಿದ್ದರು.

ಈ ವೇಳೆ ನಾನು 20 ವರ್ಷದಿಂದ ಇಲ್ಲಿದ್ದೀನಿ. ನಿನ್ನ ಕೋಚ್ ಕೂಡ ನನಗೆ ಗೊತ್ತಿದೆ ಎಂದು ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದರು. ಕಿಂಗ್ ಕೊಹ್ಲಿಯ ಈ ಹೇಳಿಕೆಯು ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಆದರೆ ಈ ಕಿತ್ತಾಟವನ್ನು ವಿರಾಟ್ ಕೊಹ್ಲಿ ಮೈದಾನದಲ್ಲೇ ಬಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಪಂದ್ಯ ಮುಗಿದ ಬಳಿಕ ಹರ್​ಪ್ರೀತ್ ಬ್ರಾರ್ ಹಾಗೂ ಕೊಹ್ಲಿ ಭೇಟಿಯಾಗಿದ್ದಾರೆ.

ಈ ವೇಳೆ ಸ್ನೇಹಹಸ್ತ ಚಾಚುವ ಮೂಲಕ ವಿರಾಟ್ ಕೊಹ್ಲಿ ಮತ್ತೆ ಹರ್​ಪ್ರೀತ್ ಬ್ರಾರ್ ಅವರ ಕಾಲೆಳೆಯುತ್ತಿರುವ ವಿಡಿಯೋವನ್ನು ಪಂಜಾಬ್ ಕಿಂಗ್ಸ್ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಇದೀಗ ವಿರಾಟ್ ಕೊಹ್ಲಿಯ ಈ ನಡೆಗೆ ಅಭಿಮಾನಿಗಳು ಭಾರೀ ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 157 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್​ಗಳಲ್ಲಿ 159 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು.