ಏನೂ ಮಾಡ್ಬೇಡಿ… ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್

Updated on: Jan 15, 2026 | 9:20 AM

virat kohli fan enters stadium: ಓಡಿ ಬಂದು ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವ ಮೂಲಕ ತನ್ನ ಅಭಿಮಾನವನ್ನು ತೆರೆದಿಟ್ಟಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿಗಳು ಕೂಡ ಮೈದಾನಕ್ಕೆ ಆಗಮಿಸಿದ್ದಾರೆ. ತನ್ನ ಅಭಿಮಾನಿಯನ್ನು ವಶಕ್ಕೆ ಪಡೆಯುವ ಮುನ್ನ ವಿರಾಟ್ ಕೊಹ್ಲಿ ಆತನಿಗೆ ಏನೂ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇದೀಗ ಅಭಿಮಾನಿ ಬಗ್ಗೆ ಕಾಳಜಿವಹಿಸಿದ ವಿರಾಟ್ ಕೊಹ್ಲಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಏಕದಿನ ಪಂದ್ಯದ ವೇಳೆ ಯುವಕನೋರ್ವ ಮೈದಾನಕ್ಕೆ ನುಗ್ಗಿದ್ದಾನೆ. ಭದ್ರತಾ ಸಿಬ್ಬಂದಿಗಳ ಕಣ್ತಪ್ಪಿಸಿ ಮೈದಾನಕ್ಕೆ ಜಿಗಿದ ಯುವಕ ನೇರವಾಗಿ ಓಡಿ ಬಂದಿದ್ದು ವಿರಾಟ್ ಕೊಹ್ಲಿಯ ಬಳಿ.

ಓಡಿ ಬಂದು ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವ ಮೂಲಕ ತನ್ನ ಅಭಿಮಾನವನ್ನು ತೆರೆದಿಟ್ಟಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿಗಳು ಕೂಡ ಮೈದಾನಕ್ಕೆ ಆಗಮಿಸಿದ್ದಾರೆ. ತನ್ನ ಅಭಿಮಾನಿಯನ್ನು ವಶಕ್ಕೆ ಪಡೆಯುವ ಮುನ್ನ ವಿರಾಟ್ ಕೊಹ್ಲಿ ಆತನಿಗೆ ಏನೂ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇದೀಗ ಅಭಿಮಾನಿ ಬಗ್ಗೆ ಕಾಳಜಿವಹಿಸಿದ ವಿರಾಟ್ ಕೊಹ್ಲಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ ಕಲೆಹಾಕಿದ್ದು 284 ರನ್​ಗಳು. ಈ ಗುರಿಯನ್ನು ನ್ಯೂಝಿಲೆಂಡ್ ತಂಡವು 47.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲಗೊಂಡಿದ್ದು, ಅಂತಿಮ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.