ಬೆಂಗಳೂರಿಗೆ ಆಗಮಿಸಿದ ವಿರಾಟ್: ಕೊಹ್ಲಿ ನೋಡಲು ಏರ್ಪೋರ್ಟ್ನಲ್ಲಿ ಮುಗಿಬಿದ್ದ ಫ್ಯಾನ್ಸ್
Virat Kohli has arrived at Bengaluru: ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ-ನೆದರ್ಲೆಂಡ್ಸ್ ಪಂದ್ಯವನ್ನು ಆಯೋಜಿಸಲಾಗಿದೆ. ಇದೀಗ ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ.
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (ICC ODI World Cup) ಭಾರತ ಆಡಿರುವ ಎಂಟು ಪಂದ್ಯಗಳ ಪೈಕಿ ಎಂಟರಲ್ಲೂ ಗೆದ್ದು ಪರಾಕ್ರಮ ಮೆರೆದಿದೆ. ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು 14 ಪಾಯಿಂಟ್ ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರ ಪಡಿಸಿಕೊಂಡಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಸೆಮಿ ಫೈನಲ್ಗು ಮುನ್ನ ತನ್ನ ಕೊನೆಯ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಇದೀಗ ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಿಲಿಕಾನ್ ಸಿಟಿಗೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕೊಹ್ಲಿಯನ್ನು ನೋಡಲು ಏರ್ಪೋರ್ಟ್ನಲ್ಲಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದರು. ಕೊಹ್ಲಿ ಪ್ರತ್ಯೇಕವಾಗಿ ಬೆಂಗಳೂರಿಗೆ ತಲುಪಿದ್ದಾರೆ. ಉಳಿದ ಆಟಗಾರರು ಒಟ್ಟಾಗಿ ಇಂದು ಸಂಜೆಯ ಒಳಗೆ ತಲುಪಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ