Ram mandir: ರಾಮಲಾಲ ಪ್ರಾಣ ಪ್ರತಿಷ್ಠಾಕ್ಕಾಗಿ ಅಯೋಧ್ಯೆಗೆ ತಲುಪಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

|

Updated on: Jan 22, 2024 | 6:56 AM

Virat Kohli in Ayodhya: ರಾಮಲಾಲ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ವಿರಾಟ್ ಜೊತೆಗೆ ಎಂಎಸ್ ಧೋನಿ, ಸಚಿನ್ ತೆಂಡೂಲ್ಕರ್, ಆರ್ ಅಶ್ವಿನ್, ಹರ್ಮನ್‌ಪ್ರೀತ್ ಕೌರ್ ಮತ್ತು ಮಿಥಾಲಿ ರಾಜ್ ಸೇರಿದಂತೆ ಹಲವಾರು ಕ್ರಿಕೆಟಿಗರನ್ನು ಆಹ್ವಾನಿಸಲಾಗಿತ್ತು. ಈ ಪೈಕಿ ಕೊಹ್ಲಿ ಅಯೋಧ್ಯೆಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

ರಾಮಮಂದಿರ ಪ್ರಾಣ ಪ್ರತಿಷ್ಠೆಗೂ ಮುನ್ನ ವಿರಾಟ್ ಕೊಹ್ಲಿ (Virat Kohli) ಅಯೋಧ್ಯೆಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವಿರಾಟ್ ಅವರ ಬೆಂಗಾವಲು ಪಡೆ ಅಯೋಧ್ಯೆ ಪ್ರವೇಶಿಸುವುದನ್ನು ಕಾಣಬಹುದು. ವಿರಾಟ್ ಜೊತೆಗೆ ಎಂಎಸ್ ಧೋನಿ, ಸಚಿನ್ ತೆಂಡೂಲ್ಕರ್, ಆರ್ ಅಶ್ವಿನ್, ಹರ್ಮನ್‌ಪ್ರೀತ್ ಕೌರ್ ಮತ್ತು ಮಿಥಾಲಿ ರಾಜ್ ಸೇರಿದಂತೆ ಹಲವಾರು ಕ್ರಿಕೆಟಿಗರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೊಹ್ಲಿಗೆ ಬಿಸಿಸಿಐ ಒಂದು ದಿನದ ರಜೆ ಕೂಡ ನೀಡಿದೆ. ರೋಹಿತ್ ಶರ್ಮಾ ಸದ್ಯ ಮುಂಬೈನಲ್ಲಿದ್ದು, ಇವರು ಆಗಮಿಸುವುದು ಅನುಮಾನ ಎನ್ನಲಾಗಿದೆ. ಈಗಾಗಲೇ ಅನುಭವಿ ಸ್ಪಿನ್ನರ್ ಅನಿಲ್ ಕುಂಬ್ಳೆ ಮತ್ತು ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ದೇವಾಲಯದ ಉದ್ಘಾಟನೆಗೆ ಅಯೋಧ್ಯೆ ತಲುಪಿದ್ದಾರೆ. ಅಲ್ಲದೆ, ಸಚಿನ್ ತೆಂಡೂಲ್ಕರ್ ಮತ್ತು ರವೀಂದ್ರ ಜಡೇಜಾ ಅಯೋಧ್ಯೆಗೆ ತಲುಪಿದ್ದಾರೆ ಎಂದು ವರದಿಗಳಾಗಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ