IPL 2025 Final: ಮಗುವಿನಂತೆ ಓಡಿ ಹೋಗಿ ರವಿಶಾಸ್ತ್ರಿಯ ಮಡಿಲೇರಿದ ವಿರಾಟ್ ಕೊಹ್ಲಿ
IPL 2025 Final RCB vs PBKS: ಐಪಿಎಲ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 184 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ರೋಚಕ ಜಯದೊಂದಿಗೆ ಆರ್ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಬರೋಬ್ಬರಿ 17 ವರ್ಷಗಳ ಕಾಯುವಿಕೆ ಕೊನೆಗೊಂಡಿದೆ. 18ನೇ ವರ್ಷದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಈ ಸಂಭ್ರಮದ ನಡುವೆ ಕೊಹ್ಲಿ ಕಳೆದ 17 ವರ್ಷಗಳಲ್ಲಿ ತನ್ನ ಜೊತೆಗಿದ್ದವರನ್ನು ಮರೆತಿರಲಿಲ್ಲ ಎಂಬುದು ವಿಶೇಷ. ಇದಕ್ಕೆ ಸಾಕ್ಷಿ ಟೀಮ್ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿಯೊಂದಿಗೆ ಹಂಚಿಕೊಂಡ ಸಂಭ್ರಮದ ಕ್ಷಣಗಳು.
ಆರ್ಸಿಬಿ ತಂಡ ಗೆಲ್ಲುತ್ತಿದ್ದಂತೆ ಭಾವುಕರಾಗಿದ್ದ ಕೊಹ್ಲಿ, ಆ ಬಳಿಕ ಪುಟ್ಟ ಮಗುವಿನಂತೆ ಸಂಭ್ರಮಿಸುತ್ತಿರುವುದು ಕಂಡು ಬಂತು. ಇದರ ನಡುವೆ ಕಾಮೆಂಟ್ರಿ ಮಾಡುತ್ತಿದ್ದ ರವಿ ಶಾಸ್ತ್ರಿ ಅವರು ಕೊಹ್ಲಿಯ ಅವರ ಕಣ್ಣಿಗೆ ಬಿದ್ದಿದ್ದಾರೆ. ಈ ವೇಳೆ ಪುಟ್ಟ ಮಗುವಿನಂತೆ ಓಡಿ ಬಂದು ವಿರಾಟ್ ಕೊಹ್ಲಿ, ಶಾಸ್ತ್ರಿ ಅವರ ಮಡಿಲೇರಿ ತಬ್ಬಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಅಹಮದಾಬಾದ್ನಲ್ಲಿ ನಡೆದ ಐಪಿಎಲ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 184 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್ಗಳ ರೋಚಕ ಜಯ ಸಾಧಿಸಿ ಆರ್ಸಿಬಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ

ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!

ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್

ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
