IPL 2025: 6,6,6,6,6..; ಸಿಎಸ್ಕೆ ವಿರುದ್ಧ ಸ್ಫೋಟಕ ಅರ್ಧಶತಕ ಸಿಡಿಸಿದ ಕೊಹ್ಲಿ..!
Virat Kohli Blasts 62 Runs in IPL 2025: ಐಪಿಎಲ್ 2025ರಲ್ಲಿ ವಿರಾಟ್ ಕೊಹ್ಲಿ ಅವರು ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅವರು 33 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ 62 ರನ್ ಗಳಿಸಿ 7ನೇ ಅರ್ಧಶತಕ ಸಿಡಿಸಿದ್ದಾರೆ. ತವರು ಮೈದಾನದಲ್ಲಿ ಸತತ ಎರಡನೇ ಅರ್ಧಶತಕ ಇದಾಗಿದೆ. ಖಲೀಲ್ ಅಹ್ಮದ್ ಅವರ ಓವರ್‌ನಲ್ಲಿ ಎರಡು ಸಿಕ್ಸರ್‌ಗಳನ್ನು ಬಾರಿಸಿ ಅವರು ತಮ್ಮ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿದ್ದಾರೆ.
ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಕೊಹ್ಲಿ ಈ ಸೀಸನ್ನ 7ನೇ ಅರ್ಧಶತಕವನ್ನು ಪೂರೈಸಿದರು. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತವರು ನೆಲದಲ್ಲಿ ಸತತ ಎರಡನೇ ಪಂದ್ಯದಲ್ಲಿ ಅರ್ಧಶತಕ ಗಳಿಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 33 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 62 ರನ್ ಕಲೆಹಾಕಿದರು. ಜಡೇಜಾ ಎಸೆದ 11ನೇ ಓವರ್‌ನಲ್ಲಿ ಒಂದು ಸಿಕ್ಸರ್ ಮತ್ತು ಎರಡು ಬೌಂಡರಿಗಳನ್ನು ಬಾರಿಸುವ ಮೂಲಕ ಕೊಹ್ಲಿ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದರಲ್ಲೂ ಕೊಹ್ಲಿ ನಾಲ್ಕನೇ ಓವರ್ ಬೌಲ್ ಮಾಡಿದ ಖಲೀಲ್ ಅಹ್ಮದ್ ಎಸೆತದಲ್ಲಿ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿದರು.