Virat Kohli: ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ವಿರಾಟ್ ಕೊಹ್ಲಿ ಪಡೆಯುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ
Virat Kohli Instagram: ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲಿದ್ದಾರೆ. ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡುವ ಪೋಸ್ಟ್ ನಿಂದ ಕೋಟಿಗಟ್ಟಲೆ ಹಣ ಸಂಪಾದನೆ ಮಾಡುತ್ತಾರೆ.
ಭಾರತ ಕ್ರಿಕೆಟ್ ತಂಡದ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದಾರೆ. ಕೊಹ್ಲಿ ಕಳೆದ ಎರಡು ವರ್ಷಗಳಿಂದ ಶತಕದ ಬರ ಎದುರಿಸುತ್ತಿದ್ದು, ಕಳಪೆ ಫಾರ್ಮ್ನಲ್ಲಿದ್ದಾರೆ. ಆದರೂ ಇವರ ಬ್ರ್ಯಾಂಡ್ ವ್ಯಾಲ್ಯೂ ಕೊಂಚವೂ ಕುಸಿದಿಲ್ಲ. ವರ್ಷಕ್ಕೆ ಕೋಟಿ ಕೋಟಿ ಹಣ ಸಂಪಾದನೆ ಮಾಡುತ್ತಿದ್ದಾರೆ. ಸದ್ಯ ಹೊಸ ವಿಚಾರ ಏನೆಂದರೆ ಇವರು ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಪಡೆದುಕೊಳ್ಳುತ್ತಿರುವ ಸಂಭಾವನೆ ವಿಷಯ. ಹೌದು, ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 177 ದಶಲಕ್ಷ ಹಿಂಬಾಲಕರು ವಿರಾಟ್ ಕೊಹ್ಲಿ ಅವರನ್ನ ಫಾಲೋ ಮಾಡುತ್ತಿದ್ದು ಅವರು ಮಾಡುವ ಒಂದು ಪೋಸ್ಟ್ ಗಾಗಿ ಪ್ರತಿನಿತ್ಯ ಕಾಯುತ್ತಲೇ ಇರುತ್ತಾರೆ. ಹೀಗೆ ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡುವ ಪೋಸ್ಟ್ ನಿಂದ ಕೋಟಿಗಟ್ಟಲೆ ಹಣ ಸಂಪಾದನೆ ಮಾಡುತ್ತಾರೆ.
ಕೊಹ್ಲಿ ತಮ್ಮ ಒಂದೇ ಒಂದು ಪ್ರೊಮೋಷನಲ್ ಪೋಸ್ಟ್‌ಗೆ $680,000 ಯುಎಸ್ ಡಾಲರ್ ಪಡೆದುಕೊಳ್ಳುತ್ತಾರೆ. ಅಂದರೆ ಭಾರತೀಯ ಕರೆನ್ಸಿಯಲ್ಲಿ ಬರೋಬ್ಬರಿ 5.05 ಕೋಟಿ ರೂ. ಗಳನ್ನು ಜೇಬಿಗಿಳಿಸಿಕೊಳ್ಳುತ್ತಾರೆ. ವಿಶ್ವದಲ್ಲಿಯೇ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಅತಿ ಹೆಚ್ಚು ಸಂಭಾವನೆ ಪಡೆಯುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರ ಸ್ಥಾನದಲ್ಲಿದ್ದಾರೆ. ಇವರು 11.9 ಕೋಟಿ ರೂ ಸಂಭಾವನೆ ಪಡೆದುಕೊಳ್ಳುತ್ತಾರೆ.
New Zealand vs Bangladesh: 1 ಎಸೆತದಲ್ಲಿ 7 ರನ್ ಗಳಿಸಿದ ನ್ಯೂಜಿಲೆಂಡ್ ಬ್ಯಾಟರ್ ವಿಲ್ ಯಂಗ್: ಇದು ಹೇಗೆ ಸಾಧ್ಯ?
Mayank Agarwal: ಐಸಿಸಿ ತಿಂಗಳ ಆಟಗಾರರ ರೇಸ್ನಲ್ಲಿ ಸ್ಥಾನ ಪಡೆದ ಕನ್ನಡಿಗ ಮಯಾಂಕ್ ಅಗರ್ವಾಲ್
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

