IND vs SA 1st Test: ಸೆಂಚುರಿಯನ್​ನಲ್ಲಿ ಆರ್​ಸಿಬಿಯ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಕೊಹ್ಲಿ: ವಿಡಿಯೋ

IND vs SA 1st Test: ಸೆಂಚುರಿಯನ್​ನಲ್ಲಿ ಆರ್​ಸಿಬಿಯ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಕೊಹ್ಲಿ: ವಿಡಿಯೋ

Vinay Bhat
|

Updated on: Dec 28, 2023 | 9:41 AM

Virat Kohli: ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯದ ನಡುವೆ ಸೆಂಚುರಿಯನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಯಾಗಿದ್ದ ಪುಟ್ಟ ಹುಡುಗನನ್ನು ವಿರಾಟ್ ಕೊಹ್ಲಿ ಭೇಟಿಯಾದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸೆಂಚುರಿಯನ್​ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ತಲುಪುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಶತಕದ ನೆರವಿನಿಂದ ಟೀಮ್ ಇಂಡಿಯಾ 245 ರನ್ ಗಳಿಸಿದರೆ, ಆಫ್ರಿಕಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 256 ರನ್ ಕಲೆಹಾಕಿದೆ. ಈ ಪಂದ್ಯದ ನಡುವೆ ಸೆಂಚುರಿಯನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಯಾಗಿದ್ದ ಪುಟ್ಟ ಹುಡುಗನನ್ನು ವಿರಾಟ್ ಕೊಹ್ಲಿ ಭೇಟಿಯಾದರು. ಕೊಹ್ಲಿ ಆರ್‌ಸಿಬಿ ಜೆರ್ಸಿಗೆ ಸಹಿ ಮಾಡಿ ಅಭಿಮಾನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಿರಾಟ್ ವಿಡಿಯೋವನ್ನು ಹಂಚಿಕೊಂಡಿದೆ. ಊಟದ ವಿರಾಮದ ವೇಳೆ ಕೊಹ್ಲಿ ಅವರನ್ನು ಭೇಟಿ ಮಾಡಿ ಖುಷಿಪಟ್ಟರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. (ವಿಡಿಯೋ ಕೃಪೆ: ಸ್ಟಾರ್ ಸ್ಪೋರ್ಟ್ಸ್ ಕನ್ನಡ)

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ