RCB vs LSG: 4,4,4,4,4,4.. ಅರ್ಧಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ
Virat Kohli Claims IPL Orange Cap: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ LSG ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 49 ರನ್ ಗಳಿಸಿ, ಆರ್‌ಸಿಬಿಗೆ ಸ್ಫೋಟಕ ಆರಂಭ ನೀಡಿದರು. ಈ ಭರ್ಜರಿ ಇನ್ನಿಂಗ್ಸ್‌ನೊಂದಿಗೆ, ಕೊಹ್ಲಿ 5 ಪಂದ್ಯಗಳಲ್ಲಿ 228 ರನ್ ಗಳಿಸಿ, ಹೆನ್ರಿಕ್ ಕ್ಲಾಸೆನ್ ಅವರನ್ನು ಹಿಂದಿಕ್ಕಿ ಐಪಿಎಲ್ ಆರೆಂಜ್ ಕ್ಯಾಪ್ ಪಡೆದರು. ಆರ್‌ಸಿಬಿ ಪರ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನವು ತಂಡದ ಗೆಲುವಿಗೆ ನಿರ್ಣಾಯಕವಾಯಿತು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಂದೊಳ್ಳೆ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ನೋ ನೀಡಿದ 147 ರನ್ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ಪರ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಲಕ್ನೋ ಬ್ಯಾಟರ್ಗಳು ರನ್ ಗಳಿಸಲು ಹೆಣಗಾಡಿದ ಪಿಚ್ನಲ್ಲಿ ಬೌಂಡರಿಗಳ ಮಳೆಗರೆದರು. ತಮ್ಮ ಇನ್ನಿಂಗ್ಸ್ನಲ್ಲಿ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್ ಸಹಿತ 49 ರನ್ ಬಾರಿಸಿ ಔಟಾದರು. ಇದರ ಜೊತೆಗೆ ಕೊಹ್ಲಿ, ಪಡಿಕ್ಕಲ್ ಜೊತೆಗೂಡಿ ಎರಡನೇ ವಿಕೆಟ್ಗೆ ಅರ್ಧಶತಕದ ಜೊತೆಯಾಟವನ್ನು ನಿರ್ಮಿಸಿದರು.
ವಿರಾಟ್ ಕೊಹ್ಲಿ 49 ರನ್ ಗಳಿಸಿ ಅವೇಶ್ ಖಾನ್ ಎಸೆತದಲ್ಲಿ ಕ್ಯಾಚ್ ನೀಡಿ ಔಟ್ ಆದರು. ಆದಾಗ್ಯೂ ಕೊಹ್ಲಿ ಈ 49 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್‌ನ ಹೆನ್ರಿಕ್ ಕ್ಲಾಸೆನ್ ಅವರನ್ನು ಹಿಂದಿಕ್ಕಿದರು. ವಾಸ್ತವವಾಗಿ ಹೆನ್ರಿಕ್ ಕ್ಲಾಸೆನ್ 5 ಇನ್ನಿಂಗ್ಸ್‌ಗಳಲ್ಲಿ ಎರಡು ಅರ್ಧಶತಕಗಳ ಸಹಾಯದಿಂದ 224 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಆದರೀಗ ವಿರಾಟ್ ಕೊಹ್ಲಿ ಐದು ಪಂದ್ಯಗಳಲ್ಲಿ ಎರಡು ಅರ್ಧಶತಕಗಳ ಸಹಾಯದಿಂದ 228 ರನ್ ಗಳಿಸಿದ್ದು, ಆರೆಂಜ್ ಕ್ಯಾಪ್ ವಿಜೇತರಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಈ ಕ್ಯಾಪ್ ಅನ್ನು ಯಾರು ಧರಿಸುತ್ತಾರೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.