VIDEO: ವಿರಾಟ್ ಕೊಹ್ಲಿಯ ಮಾಸ್ಟರ್ ಸ್ಟ್ರೋಕ್ಗೆ 3 ವರ್ಷ
India vs Pakistan: ಕೊನೆಯ ಓವರ್ನಲ್ಲಿ 16 ರನ್ಗಳ ಗುರಿಯನ್ನು ಬೆನ್ನತ್ತಿ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿತು. ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ನೊಂದಿಗೆ 53 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಅಜೇಯ 82 ರನ್ ಬಾರಿಸಿದರು. ಈ ಮೂಲಕ ಪಾಕಿಸ್ತಾನ್ ವಿರುದ್ಧ ಸ್ಮರಣೀಯ ಗೆಲುವು ತಂದುಕೊಟ್ಟರು.
2022, ಅಕ್ಟೋಬರ್ 23… ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 16ನೇ ಪಂದ್ಯದಲ್ಲಿ ಬದ್ಧವೈರಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು.
ಟೀಮ್ ಇಂಡಿಯಾಗೆ 160 ರನ್ಗಳ ಗುರಿ. ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ (4) ಹಾಗೂ ಕೆಎಲ್ ರಾಹುಲ್ (4) ಹೋದ ವೇಗದಲ್ಲೇ ಹಿಂತಿರುಗಿದ್ದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ 15 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಅಕ್ಷರ್ ಪಟೇಲ್ ಕಲೆಹಾಕಿದ್ದು ಕೇವಲ 2 ರನ್ ಮಾತ್ರ.
ಕೇವಲ 31 ರನ್ಗಳಿಗೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದಾಗ್ಯೂ ಒಂದೆಡೆ ವಿರಾಟ್ ಕೊಹ್ಲಿ ಕ್ರೀಸ್ ಕಚ್ಚಿ ನಿಂತಿದ್ದರು. ಹಾರ್ದಿಕ್ ಪಾಂಡ್ಯ ಜೊತೆಗೂಡಿ 4ನೇ ವಿಕೆಟ್ಗೆ ಶತಕದ ಜೊತೆಯಾಟವಾಡಿದರು. ಈ ಶತಕದ ಜೊತೆಯಾಟದ ಹೊರತಾಗಿಯೂ ಭಾರತ ತಂಡಕ್ಕೆ ಕೊನೆಯ ಮೂರು ಓವರ್ಗಳಲ್ಲಿ 48 ರನ್ಗಳ ಅವಶ್ಯಕತೆಯಿತ್ತು.
ಶಾಹಿನ್ ಅಫ್ರಿದಿ ಎಸೆದ 18ನೇ ಓವರ್ನಲ್ಲಿ ಕೊಹ್ಲಿ-ಪಾಂಡ್ಯ ಜೊತೆಗೂಡಿ 17 ರನ್ ಕಲೆಹಾಕಿದರು. ಇನ್ನು 19ನೇ ಓವರ್ ಎಸೆಯಲು ಬಂದಿದ್ದು ಹ್ಯಾರಿಸ್ ರೌಫ್. ಮೊದಲ 4 ಎಸೆತಗಳಲ್ಲಿ ರೌಫ್ ನೀಡಿದ್ದು ಕೇವಲ 3 ರನ್ ಮಾತ್ರ. ಐದನೇ ಎಸೆತದಲ್ಲಿ ವಿರಾಟ್ ಕೊಹ್ಲಿ ಸ್ಟ್ರೈಕ್ಗೆ ಬಂದರು.
ಹ್ಯಾರಿಸ್ ರೌಫ್ ಎಸೆದ ಲೆಂಗ್ತ್ ಬಾಲ್ನಲ್ಲಿ ವಿರಾಟ್ ಕೊಹ್ಲಿ ಸ್ಟ್ರೈಟ್ ಹಿಟ್ ಮೂಲಕ ಅತ್ಯಾಕರ್ಷಕ ಸಿಕ್ಸ್ ಸಿಡಿಸಿದರು. ಮರು ಎಸೆತದಲ್ಲಿ ಲೆಗ್ಸೈಡ್ನತ್ತ ಫ್ಲಿಕ್ ಮಾಡುವ ಮೂಲಕ 2ನೇ ಸಿಕ್ಸರ್ ಬಾರಿಸಿದರು. ಈ ಮೂಲಕ 19ನೇ ಓವರ್ನಲ್ಲಿ ಟೀಮ್ ಇಂಡಿಯಾ 15 ರನ್ ಕಲೆಹಾಕಿದರು.
ಅದರಂತೆ ಕೊನೆಯ ಓವರ್ನಲ್ಲಿ 16 ರನ್ಗಳ ಗುರಿಯನ್ನು ಬೆನ್ನತ್ತಿ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿತು. ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ನೊಂದಿಗೆ 53 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಅಜೇಯ 82 ರನ್ ಬಾರಿಸಿದರು. ಈ ಮೂಲಕ ಪಾಕಿಸ್ತಾನ್ ವಿರುದ್ಧ ಸ್ಮರಣೀಯ ಗೆಲುವು ತಂದುಕೊಟ್ಟರು.
ವಿರಾಟ್ ಕೊಹ್ಲಿ ಆಡಿದ ಈ ಸ್ಮರಣೀಯ ಇನಿಂಗ್ಸ್ ಅನ್ನು ಟಿ20 ಕ್ರಿಕೆಟ್ ಇತಿಹಾಸದ ಗ್ರೇಟೆಸ್ಟ್ ಇನಿಂಗ್ಸ್ ಎಂದು ಬಣ್ಣಿಸಲಾಗುತ್ತದೆ. ಅದ್ಭುತ ಇನಿಂಗ್ಸ್ ಮೂಡಿಬಂದು ಇಂದಿಗೆ ಮೂರು ವರ್ಷಗಳಾಗಿವೆ.