RCB vs KKR, IPL 2024: ವಿರಾಟ್ ಕೊಹ್ಲಿ ಪ್ಯಾಡ್ ಕಟ್ಟುವ ಸ್ಟೈಲೇ ಡಿಫರೆಂಟ್: ವಿಡಿಯೋ ನೋಡಿ

|

Updated on: Mar 29, 2024 | 9:02 AM

Virat Kohli Practice Video: ಐಪಿಎಲ್ 2024 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ಮುಖಾಮುಖಿಯಾಗಲಿವೆ. ಇದಕ್ಕಾಗಿ ಆರ್​ಸಿಬಿ ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದೆ. ಅದರಲ್ಲೂ ವಿರಾಟ್ ಕೊಹ್ಲಿ ಚಿನ್ನಸ್ವಾಮಿಯಲ್ಲಿ ಕಠಿಣ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಇದರ ನಡುವೆ ಕೊಹ್ಲಿ ಪ್ಯಾಡ್ ಕಟ್ಟುವ ವಿಡಿಯೋ ವೈರಲ್ ಆಗುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಮಾರ್ಚ್ 29) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR) ಮುಖಾಮುಖಿಯಾಗಲಿವೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ಮೂರನೇ ಪಂದ್ಯವಾಗಿದ್ದು, ಕೆಕೆಆರ್ ತನ್ನ ಎರಡನೇ ಪಂದ್ಯವನ್ನು ಆಡಲಿದೆ. ಆಡಿರುವ ಎರಡು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದೆ. ಅದರಲ್ಲೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಚಿನ್ನಸ್ವಾಮಿಯಲ್ಲಿ ಕಠಿಣ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಇದರ ನಡುವೆ ಕೊಹ್ಲಿ ಪ್ಯಾಡ್ ಕಟ್ಟುವ ವಿಡಿಯೋ ವೈರಲ್ ಆಗುತ್ತಿದೆ. ಸಾಮಾನ್ಯವಾಗಿ ಪ್ಯಾಡ್ ಕಟ್ಟಲು ಆಟಗಾರರು ಕೆಲ ನಿಮಿಷ ತೆಗೆದುಕೊಳ್ಳುತ್ತಾರೆ. ಆದರೆ, ಇಲ್ಲಿ ವಿರಾಟ್ ಕೆಲವೇ ಸೆಕೆಂಡ್​ಗಳಲ್ಲಿ ವೇಗವಾಗಿ ಪ್ಯಾಡ್ ಕಟ್ಟಿ ಅಭ್ಯಾಸ ಶುರುಮಾಡಿದ್ದಾರೆ. ಇದನ್ನು ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ