IND vs SA: 746 ದಿನಗಳ ನಂತರ ಚೆಂಡನ್ನು ಬೌಂಡರಿ ಗೆರೆ ದಾಟಿಸಿದ ಕಿಂಗ್ ಕೊಹ್ಲಿ
Virat Kohli Ranchi ODI: ರಾಂಚಿ ಏಕದಿನದಲ್ಲಿ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಅದ್ಭುತ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅಭಿಮಾನಿಗಳನ್ನು ರೋಮಾಂಚನಗೊಳಿಸಿದರು. ಈ ಪ್ರದರ್ಶನವು ಕೊಹ್ಲಿಯ 746 ದಿನಗಳ ಏಕದಿನ ಸಿಕ್ಸರ್ ಬರಗಾಲಕ್ಕೆ ಅಂತ್ಯ ಹಾಡಿತು. ಕೊನೆಯ ಬಾರಿಗೆ 2023ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಎರಡು ಸಿಕ್ಸರ್‌ಗಳನ್ನು ಹೊಡೆದಿದ್ದರು. ಈ ಸಿಕ್ಸರ್‌ಗಳು ಅವರ ಅಸಾಂಪ್ರದಾಯಿಕ ಬ್ಯಾಟಿಂಗ್ ಶೈಲಿಯನ್ನು ಮತ್ತೊಮ್ಮೆ ಪ್ರದರ್ಶಿಸಿದವು.
ದಕ್ಷಿಣ ಆಫ್ರಿಕಾ ವಿರುದ್ಧದ ರಾಂಚಿ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಅಸಾಂಪ್ರದಾಯಿಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನ ಆರಂಭದಲ್ಲಿ ಎರಡು ಸಿಕ್ಸ್‌ಗಳನ್ನು ಬಾರಿಸಿದರು. ಮೊದಲ ಸಿಕ್ಸ್ ನಾಂಡ್ರೆ ಬರ್ಗರ್ ಅವರ ಓವರ್‌ನಲ್ಲಿ ಬಂದರೆ, ಎರಡನೆಯದು ಬಾರ್ಟ್‌ಮನ್ ಬೌಲಿಂಗ್‌ನಲ್ಲಿ ಬಂದಿತು. ಈ ಎರಡು ಸಿಕ್ಸ್‌ಗಳೊಂದಿಗೆ, ವಿರಾಟ್ ಕೊಹ್ಲಿ ಬರೋಬ್ಬರಿ 746 ದಿನಗಳ ನಂತರ ಏಕದಿನದಲ್ಲಿ ಸಿಕ್ಸರ್ ಬರವನ್ನು ಕೊನೆಗೊಳಿಸಿದರು.
ದಕ್ಷಿಣ ಆಫ್ರಿಕಾ ವಿರುದ್ಧದ ರಾಂಚಿ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಮೊದಲ ಸಿಕ್ಸರ್ 291 ದಿನಗಳ ಬರಗಾಲಕ್ಕೆ ಅಂತ್ಯ ಹಾಡಿತು. ಕೊಹ್ಲಿ ಈಗ 291 ದಿನಗಳ ನಂತರ ಏಕದಿನ ಪಂದ್ಯದಲ್ಲಿ ಸಿಕ್ಸರ್ ಬಾರಿಸಿದ್ದಾರೆ. ಕೊಹ್ಲಿ ಕೊನೆಯಾದಾಗಿ ಫೆಬ್ರವರಿ 12, 2025 ರಂದು ಅಹಮದಾಬಾದ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಸಿಕ್ಸರ್ ಬಾರಿಸಿದ್ದರು.
ಇಷ್ಟೇ ಅಲ್ಲ, ವಿರಾಟ್ ಕೊಹ್ಲಿ 746 ದಿನಗಳ ನಂತರ ಒಂದು ಏಕದಿನ ಇನ್ನಿಂಗ್ಸ್‌ನಲ್ಲಿ ಎರಡು ಅಥವಾ ಹೆಚ್ಚಿನ ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಕೊನೆಯ ಬಾರಿಗೆ ಏಕದಿನದಲ್ಲಿ ಎರಡು ಅಥವಾ ಹೆಚ್ಚಿನ ಸಿಕ್ಸರ್‌ಗಳನ್ನು ಬಾರಿಸಿದ್ದು 2023 ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಅದು ನ್ಯೂಜಿಲೆಂಡ್ ವಿರುದ್ಧ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ 113 ಎಸೆತಗಳಲ್ಲಿ 117 ರನ್‌ಗಳ ಇನ್ನಿಂಗ್ಸ್ ಆಡಿದರು ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದ್ದರು. ಈಗ, 746 ದಿನಗಳ ನಂತರ, ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

