ಗಂಭೀರ್ನ ಕ್ಯಾರೇ ಮಾಡದ ವಿರಾಟ್ ಕೊಹ್ಲಿ: ವಿಡಿಯೋ ವೈರಲ್
Virat Kohli vs Gautam Gambhir: ವಿಶಾಖಪಟ್ಟಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 47.5 ಓವರ್ಗಳಲ್ಲಿ 270 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ 39.5 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರನೇ ಏಕದಿನ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ವಿರಾಟ್ ಕೊಹ್ಲಿ (Virat Kohli) ಹಾಗೂ ಕೋಚ್ ಗೌತಮ್ ಗಂಭೀರ್ (Gautam Gambhir) ನಡುವಣ ಮುಖಾಮುಖಿ.
ಸೌತ್ ಆಫ್ರಿಕಾ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಬಳಿಕ ಪೆವಿಲಿಯನ್ಗೆ ಮರಳುತ್ತಿದ್ದ ವಿರಾಟ್ ಕೊಹ್ಲಿಗೆ ಸಹ ಆಟಗಾರರು ಹಸ್ತಲಾಘವ ಮತ್ತು ಅಪ್ಪುಗೆ ನೀಡಿದ್ದರು. ಇತ್ತ ರೋಹಿತ್ ಶರ್ಮಾ, ರವೀಂದ್ರ ಜಡೇಜಾರೊಂದಿಗೆ ನಗುತ್ತಾ ಅಪ್ಪುಗೆ ನೀಡಿದ ಕೊಹ್ಲಿ ಗೌತಮ್ ಗಂಭೀರ್ ಬರುತ್ತಿದ್ದಂತೆ ಗಂಭೀರವಾದರು. ಅಷ್ಟೇ ಅಲ್ಲದೆ ಅವರ ಮುಖವನ್ನು ನೋಡದೇ ಕೈ ನೀಡಿ ಮುಂದೆ ನಡೆದರು.
ಇದೀಗ ಈ ವಿಡಿಯೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರೊಂದಿಗೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಮುಸುಕಿನ ಗುದ್ದಾಟ ಏರ್ಪಟ್ಟಿರುವುದು ಕೂಡ ಖಚಿತವಾಗಿದೆ.
ಇನ್ನು ವಿಶಾಖಪಟ್ಟಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 47.5 ಓವರ್ಗಳಲ್ಲಿ 270 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ 39.5 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

