ಎಂತಹ ಸಂಸ್ಕಾರ… ಸಹ ಆಟಗಾರನ ತಾಯಿಯ ಕಾಲಿಗೆ ಬಿದ್ದ ವಿರಾಟ್ ಕೊಹ್ಲಿ
Champions Trophy 2025: ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 49 ಓವರ್ಗಳಲ್ಲಿ 254 ರನ್ ಬಾರಿಸಿ 4 ವಿಕೆಟ್‌ಗಳ ಗೆಲುವು ದಾಖಲಿಸಿದೆ.
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾ ಮೂರನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಬಾರಿ ನ್ಯೂಝಿಲೆಂಡ್ ತಂಡವನ್ನು ಮಣಿಸಿ ಭಾರತ ಟ್ರೋಫಿ ಎತ್ತಿ ಹಿಡಿದಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 50 ಓವರುಗಳಲ್ಲಿ 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 49 ಓವರುಗಳಲ್ಲಿ ಗುರಿ ಮುಟ್ಟಿ 4 ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಆಟಗಾರರು ಸಖತ್ ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.
ಇದರ ನಡುವೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ತನ್ನ ತಾಯಿ ನಿಮ್ಮನ್ನು ಭೇಟಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ವಿರಾಟ್ ಕೊಹ್ಲಿಗೆ ಹೇಳಿದ್ದಾರೆ. ತಕ್ಷಣವೇ ತೆರಳಿದ ಕೊಹ್ಲಿ ಶಮಿ ಅವರ ತಾಯಿಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಅಲ್ಲದೆ ಮೊಹಮ್ಮದ್ ಶಮಿ ಅವರ ಕುಟುಂಬಸ್ಥರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯ ಸರಳತೆ, ಸಂಸ್ಕಾರಭರಿತ ನಡೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.