ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕ. ಅಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ. ಹೀಗಾಗಿ ಅಂತಿಮ ಏಕದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 3ನೇ ಏಕದಿನ ಪಂದ್ಯವು ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಇಂದೋರ್ಗೆ ಆಗಮಿಸಿರುವ ವಿರಾಟ್ ಕೊಹ್ಲಿ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸರಣಿಯ ನಿರ್ಣಾಯಕ ಪಂದ್ಯಕ್ಕೂ ಮುನ್ನ ಕೊಹ್ಲಿ ತನ್ನ ಸಹ ಆಟಗಾರ ಕುಲ್ದೀಪ್ ಯಾದವ್ ಅವರೊಂದಿಗೆ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಅಲ್ಲದೆ ಕೆಲ ಹೊತ್ತು ದೇವರ ಸನ್ನಿಧಿಯಲ್ಲೇ ಸಮಯ ಕಳೆದರು.
ಇದೀಗ ವಿರಾಟ್ ಕೊಹ್ಲಿ ಮಹಾಕಾಳೇಶ್ವರನಿಗೆ ತಲೆಬಾಗಿ ಪ್ರಾರ್ಥಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಂದಹಾಗೆ ಕೊಹ್ಲಿ ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲೇನಲ್ಲ.
ಈ ಹಿಂದೆ 2023 ರಲ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಆಗಮಿಸಿ ಈ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿ ಶ್ರೀ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ವಿರಾಟ್ ಬ್ಯಾಟ್ನಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸುತ್ತಿದ್ದಾರೆ ಅಭಿಮಾನಿಗಳು.
ಅಂದಹಾಗೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕ. ಅಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ. ಹೀಗಾಗಿ ಅಂತಿಮ ಏಕದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

