ಕೊಹ್ಲಿಯನ್ನು ಕೆಣಕಿ ಸಿಕ್ಕಿಹಾಕಿಕೊಂಡ ಸಾಯಿ!
IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್ಗಳಲ್ಲಿ 161 ರನ್ ಬಾರಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಅಂತಿಮ ಪಂದ್ಯವು ಆಟಗಾರರ ವಾಕ್ಸಮರಕ್ಕೆ ಸಾಕ್ಷಿಯಾಗಿತ್ತು. ಮೊದಲಿಗೆ ಮೊಹಮ್ಮದ್ ಸಿರಾಜ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ಮಾತಿನ ಚಕಮಕಿ ನಡೆದರೆ, ಆ ಬಳಿಕ ವಿರಾಟ್ ಕೊಹ್ಲಿಯನ್ನು ಕೆಣಕುವ ಪ್ರಯತ್ನಕ್ಕೆ ಸಾಯಿ ಸುದರ್ಶನ್ ಕೈ ಹಾಕಿದರು.
ಆರ್ಸಿಬಿ ಬ್ಯಾಟಿಂಗ್ ವೇಳೆ ಫ್ರಂಟ್ ಫೀಲ್ಡಿಂಗ್ನಲ್ಲಿದ್ದ ಸಾಯಿ ಸುದರ್ಶನ್ ಭರ್ಜರಿಯಾಗಿ ಬ್ಯಾಟ್ ಮಾಡುತ್ತಿದ್ದ ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿ ಏನನ್ನೋ ಹೇಳಿದ್ದಾರೆ. ಈ ವೇಳೆ ಕೊಹ್ಲಿ ಕೂಡ ತಿರುಗೇಟು ನೀಡಿದ್ದಾರೆ. ಇದೇ ವೇಳೆ ಕೊಹ್ಲಿಯ ಬಳಿ ತೆರಳಿದ ಸಾಯಿ ಸುದರ್ಶನ್ ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದ್ದಾರೆ.
ಇದಾಗ್ಯೂ ಸಮಾಧಾನಗೊಳ್ಳದ ವಿರಾಟ್ ಕೊಹ್ಲಿ ಮತ್ತೆ ಬಂದು ಸಾಯಿ ಸುದರ್ಶನ್ಗೆ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ. ಇತ್ತ ಸುಖಾ ಸುಮ್ಮನೆ ಕೊಹ್ಲಿಯನ್ನು ಕೆಣಕಿ ಪೇಚಿಗೆ ಸಿಲುಕಿದ ಸಾಯಿ ಸುದರ್ಶನ್ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರೂ ಅಷ್ಟರಲ್ಲಾಗಲೇ ಸಿಗಬೇಕಿರುವುದೆಲ್ಲವೂ ಸಿಕ್ಕಾಗಿತ್ತು.
ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗುಜರಾತ್ ಟೈಟಾನ್ಸ್ ಆಟಗಾರ ಆರ್ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್ಗಳಲ್ಲಿ 161 ರನ್ ಬಾರಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
Published on: Jun 01, 2026 10:02 AM
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ

