Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಶತಕ: ಪಾಕಿಸ್ತಾನದಲ್ಲಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳು

ವಿರಾಟ್ ಕೊಹ್ಲಿ ಶತಕ: ಪಾಕಿಸ್ತಾನದಲ್ಲಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳು

ಝಾಹಿರ್ ಯೂಸುಫ್
|

Updated on: Feb 24, 2025 | 10:53 AM

India vs Pakistan: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಭಾನುವಾರ (ಫೆ.23) ಪಾಕಿಸ್ತಾನ್ ವಿರುದ್ಧ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ವಿಶ್ವದಾದ್ಯಂತ ಅಭಿಮಾನಿಗಳಿರುವುದು ಗೊತ್ತೇ ಇದೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದಲ್ಲೂ ಸಾಕಷ್ಟು ಅಭಿಮಾನಿಗಳಿರುವುದು ವಿಶೇಷ. ಇದಕ್ಕೆ ಸಾಕ್ಷಿಯೇ ಈ ವಿಡಿಯೋ. ಪಾಕಿಸ್ತಾನ್ ವಿರುದ್ಧ ಕಿಂಗ್ ಕೊಹ್ಲಿ ಭರ್ಜರಿ ಶತಕ ಸಿಡಿಸಿರುವುದನ್ನೇ ಪಾಕ್​ನಲ್ಲಿನ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅದು ಸಹ ಪಾಕಿಸ್ತಾನ್ ತಂಡದ ಸೋಲಿನೊಂದಿಗೆ ಎಂಬುದೇ ವಿಶೇಷ.

ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ 100 ರನ್ ಬಾರಿಸಿದ್ದರು. ಅದು ಸಹ ಟೀಮ್ ಇಂಡಿಯಾಗೆ ಗೆಲ್ಲಲು 2 ರನ್​ ಬೇಕಿದ್ದಾಗ, ಕೊಹ್ಲಿ ಫೋರ್ ಬಾರಿಸಿ ಶತಕ ಪೂರೈಸಿದ್ದರು.

ಅತ್ತ ಪಾಕಿಸ್ತಾನ್ ತಂಡದ ಸೋಲು ಖಚಿತವಾಗುತ್ತಿದ್ದಂತೆ ಪಾಕ್​ನಲ್ಲಿನ ಅಭಿಮಾನಿಗಳು ವಿರಾಟ್ ಕೊಹ್ಲಿಯ ಶತಕಕ್ಕಾಗಿ ಕಾತುರದಿಂದ ಕಾಯುತ್ತಿದ್ದರು. ಅಂತಿಮವಾಗಿ ಕೊಹ್ಲಿ ಫೋರ್ ಬಾರಿಸುತ್ತಿದ್ದಂತೆ ಇಸ್ಲಾಮಾಬಾದ್​ನಲ್ಲಿನ ಕೊಹ್ಲಿ ಫ್ಯಾನ್ಸ್ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡವು 49.4 ಓವರ್​ಗಳಲ್ಲಿ 241 ರನ್​ಗಳಿಸಿ ಆಲೌಟ್ ಆಗಿದೆ. 242 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 42.3 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 244 ರನ್ ಕಲೆಹಾಕಿದೆ. ಈ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಸೆಮಿಫೈನಲ್​ ಆಡುವುದನ್ನು ಖಚಿತಪಡಿಸಿಕೊಂಡಿದೆ.