VIDEO: ಇದು ನನ್ನ ಗ್ರೌಂಡ್… ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು

Updated on: Apr 28, 2025 | 7:24 AM

IPL 2025 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 46ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 162 ರನ್​ ಕಲೆಹಾಕಿತು. 163 ರನ್​ಗಳ ಗುರಿ ಪಡೆದ ಆರ್​ಸಿಬಿ ತಂಡವು 9 ಎಸೆತಗಳು ಬಾಕಿಯಿರುವಂತೆ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಈ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಅವರ ಕಾಲೆಳೆದಿದ್ದಾರೆ. ಪಂದ್ಯದ ಬಳಿಕ ಭೇಟಿಯಾದ ಕೆಎಲ್ ರಾಹುಲ್ ಮುಂದೆ ಇದು ನನ್ನ ಮೈದಾನ ಎಂಬ ಸೆಲೆಬ್ರೇಷನ್ ತೋರಿಸುವ ಮೂಲಕ  ಕೊಹ್ಲಿ ಕಿಚಾಯಿಸಿದ್ದಾರೆ. ಈ ವೇಳೆ ರಾಹುಲ್ ಹೌದು, ನಿಮ್ಮದೇ ಮೈದಾನ ಎಂದು ಪೆವಿಲಿಯನ್ ಮೇಲಿರುವ ಕೊಹ್ಲಿಯ ಹೆಸರನ್ನು ತೋರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.  ರಾಹುಲ್ ಅವರಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ನಗುತ್ತಾ ಕೊಹ್ಲಿ ತಬ್ಬಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ಪಡೆದುಕೊಂಡಿದ್ದಾರೆ.

ಅಂದಹಾಗೆ ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಗೆದ್ದ ಬಳಿಕ ಕೆಎಲ್ ರಾಹುಲ್ ಕಾಂತಾರಾ ಸಿನಿಮಾ ಶೈಲಿಯಲ್ಲಿ ವೃತ್ತ ಎಳೆದು ಇದು ನನ್ನ ಮೈದಾನ ಎಂದು ಸಂಭ್ರಮಿಸಿದ್ದರು. ಇದಕ್ಕೆ ಪ್ರತಿಯಾಗಿ ಇದೀಗ ವಿರಾಟ್ ಕೊಹ್ಲಿ ಇದು ನನ್ನ ಮೈದಾನ ಎಂದು ಕೆಎಲ್ ರಾಹುಲ್ ಅವರ ಕಾಲೆಳೆದಿದ್ದಾರೆ.

 

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More