ತಪ್ಪಿದ ಭಾರಿ ದುರಂತ: ಬೆಂಗಳೂರಿನಲ್ಲಿ ವರ್ಜಿನ್ ಅಟ್ಲಾಂಟಿಕ್ ವಿಮಾನ ತುರ್ತು ಭೂಸ್ಪರ್ಶ

Edited By:

Updated on: Sep 06, 2026 | 1:19 PM

ತಾಂತ್ರಿಕ ದೋಷದಿಂದಾಗಿ ಲಂಡನ್‌ಗೆ ಹೊರಟಿದ್ದ ವರ್ಜಿನ್ ಅಟ್ಲಾಂಟಿಕ್ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 270 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ದೋಷ ಕಂಡುಕೊಂಡಿತು. ಅರ್ಧ ಗಂಟೆಗೂ ಹೆಚ್ಚು ಕಾಲ ತುಮಕೂರು ಸುತ್ತಾ ಮುತ್ತ ಹಾರಾಟ ನಡೆಸಿ ಸುರಕ್ಷಿತವಾಗಿ ಇಳಿದಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ದೇವನಹಳ್ಳಿ, ಸೆಪ್ಟೆಂಬರ್​​ 06: ತಾಂತ್ರಿಕ ದೋಷದಿಂದಾಗಿ ಲಂಡನ್‌ಗೆ ಹೊರಟಿದ್ದ ವರ್ಜಿನ್ ಅಟ್ಲಾಂಟಿಕ್ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್‌ಪೋರ್ಟ್‌ನಿಂದ ಬೆಳಗ್ಗೆ 8:20ಕ್ಕೆ ಟೇಕಾಫ್ ಆಗಿದ್ದ ಈ ವಿಮಾನದಲ್ಲಿ 270 ಪ್ರಯಾಣಿಕರು ಇದ್ದರು. ಆದರೆ, ಆಗಸಕ್ಕೆ ಹಾರಿದ ಕೆಲವೇ ನಿಮಿಷಗಳಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಈ ಕಾರಣದಿಂದ, ವಿಮಾನವು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ತುಮಕೂರು ಸುತ್ತಮುತ್ತ ರೌಂಡ್ಸ್ ಹಾಕಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇದ್ದಾಗ, ವಿಮಾನವನ್ನು ಕೆಂಪೇಗೌಡ ಏರ್‌ಪೋರ್ಟ್​​ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಸದ್ಯ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ತುರ್ತು ಭೂಸ್ಪರ್ಶದ ಬಳಿಕ ಪ್ರಯಾಣಿಕರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 06, 2026 01:16 PM
Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More