ವಿಷ್ಣುವರ್ಧನ್ ಸಮಾಧಿ ನೆಲಸಮ, ಅಭಿಮಾನಿಗಳ ಆಕ್ರೋಶ: ವಿಡಿಯೋ
Vishnuvardhan: ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವು ಗೊಳಿಸಲಾಗಿದ್ದು, ಇದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾತ್ರೋರಾತ್ರಿ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ವಿಷ್ಣುವರ್ಧನ್ ಅಭಿಮಾನಿಗಳು ಸ್ಮಾರಕದ ಬಳಿ ನೆರೆದಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ಬಿಗಿ ಭದ್ರತೆ ಒದಗಿಸಲಾಗಿದೆ. ಘಟನೆ ಬಗ್ಗೆ ಅಭಿಮಾನಿಗಳು ಹೇಳಿದ್ದೇನು?
ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದು, ಇದೀಗ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ನಿರ್ಮಿಸಲಾಗಿತ್ತು. ಆದರೆ ಅಭಿಮಾನ್ ಸ್ಟುಡಿಯೋ ಬಾಲಣ್ಣ ಅವರ ಕುಟುಂಬಕ್ಕೆ ಸೇರಿದ್ದು, ಬಾಲಣ್ಣ ಕುಟುಂಬದವರು ಅಲ್ಲಿ ಸ್ಮಾರಕ ನಿರ್ಮಿಸದಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಬಾಲಣ್ಣ ಕುಟುಂಬದವರ ಪರವಾಗಿ ಆಗಿತ್ತು. ಆದರೆ ಅಭಿಮಾನಿಗಳು ಅಭಿಮಾನ್ ಸ್ಟುಡಿಯೋನಲ್ಲಿ ಸ್ಮಾರಕ ನಿರ್ಮಾಣಕ್ಕೆ ಹೋರಾಡುತ್ತಲೇ ಇದ್ದರು. ಇದೀಗ ಅಭಿಮಾನ್ ಸ್ಟುಡಿಯೋನಲ್ಲಿದ್ದ ಸಮಾಧಿಯನ್ನು ತೆರವು ಗೊಳಿಸಲಾಗಿದ್ದು, ಇದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 08, 2025 04:56 PM

