ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ? ವಿಡಿಯೋ
ಕನ್ನಡ ಚಿತ್ರರಂಗದ ಮೇರುನಟ ದಿವಂಗತ ವಿಷ್ಣುವರ್ಧನ್ ಮತ್ತು ನಟಿ ದಿವಂಗತ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಕಳೆದ ವರ್ಷವೇ ಘೋಷಣೆ ಮಾಡಿದೆ. ಅಗಲಿರುವ ಈ ಇಬ್ಬರು ಮಹನೀಯರಿಗೆ ಗೌರವ ಪೂರ್ವಕವಾಗಿ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕವನ್ನು ಸರ್ಕಾರ ನಿಗದಿಪಡಿಸಿದೆ. ಸಚಿವ ಶಿವರಾಜ್ ತಂಗಡಗಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕನ್ನಡ ಚಿತ್ರರಂಗದ (Sandalwood) ಮೇರುನಟ ದಿವಂಗತ ವಿಷ್ಣುವರ್ಧನ್ ಮತ್ತು ನಟಿ ದಿವಂಗತ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಕಳೆದ ವರ್ಷವೇ ಘೋಷಣೆ ಮಾಡಿದೆ. ಅಗಲಿರುವ ಈ ಇಬ್ಬರು ಮಹನೀಯರಿಗೆ ಗೌರವ ಪೂರ್ವಕವಾಗಿ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕವನ್ನು ಸರ್ಕಾರ ನಿಗದಿಪಡಿಸಿದೆ. ನವೆಂಬರ್ 19ರಂದು ಇಬ್ಬರು ಕಲಾವಿದರ ಪರವಾಗಿ ಅವರ ಕುಟುಂಬದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಷ್ಣುವರ್ಧನ್ ಅವರೊಟ್ಟಿಗೆ ಕೆಲ ಸಿನಿಮಾಗಳಲ್ಲಿ ನಟನೆ ಮಾಡಿರುವ ರಜನೀಕಾಂತ್ ಅವರನ್ನು ಅತಿಥಿಯಾಗಿ ಆಹ್ವಾನಿಸುವ ಬಗ್ಗೆಯೂ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 30, 2026 06:28 PM
Loading...
Unable to load recommendations.
Follow Us
