ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನಟ ವಿಷ್ಣುವರ್ಧನ್ ಅವರು ನಿಧನ ಹೊಂದಿ 16 ವರ್ಷಗಳು ಕಳೆದಿವೆ. ಅವರು ಇಲ್ಲದೆ ಅಭಿಮಾನಿಗಳು ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಅಭಿಮಾನ್ ಸ್ಟುಡಿಯೋ ಜಾಗ ವಿವಾದಕ್ಕೆ ಗುರಿಯಾಗಿದೆ. ಹೀಗಾಗಿ, ಸಮಾಧಿ ಇರೋ ಪಕ್ಕದಲ್ಲೇ ವಿಶೇಷ ಪೂಜೆ ನಡೆಸಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಇಂದು (ಡಿಸೆಂಬರ್ 30) ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 16ನೇ ವರ್ಷದ ಪುಣ್ಯ ಸ್ಮರಣೆ. ಈ ವೇಳೆ ವಿಷ್ಣುವರ್ಧನ್ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಮುಂಭಾಗದಲ್ಲಿ ಪುಣ್ಯಸ್ಮರಣೆ ಆಚರಣೆ ಮಾಡಲಾಗಿದೆ. ಈ ಜಾಗ ಅಭಿಮಾನ್ ಸ್ಟುಡಿಯೋದಿಂದ ಕೇವಲ 200 ಮೀಟರ್ ದೂರದಲ್ಲಿ ಇದೆ. ತಾತ್ಕಾಲಿಕ ಮಂಟಪ ನಿರ್ಮಿಸಿ ವಿಷ್ಣು ಅವರ ಭಾವಚಿತ್ರವಿಟ್ಟು ಪೂಜೆ ಮಾಡಲಾಗಿದೆ. ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ಅನ್ನದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 30, 2025 12:09 PM