ಅದೇ ಜಾಗದಲ್ಲಿ ವಿಷ್ಣುವರ್ಧನ್ ಪುಣ್ಯಭೂಮಿ ಆಗಬೇಕು: ಫ್ಯಾನ್ಸ್ ಪ್ರತಿಭಟನೆ
ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳಿಗೆ ನೋವಾಗಿದೆ. ಅಭಿಮಾನ್ ಸ್ಟುಡಿಯೋ ಬಳಿ ಫ್ಯಾನ್ಸ್ ಪ್ರತಿಭಟನೆ ಮಾಡಿದ್ದಾರೆ. ಅದೇ ಜಾಗದಲ್ಲಿ ವಿಷ್ಣುವರ್ಧನ್ ಅವರ ಪುಣ್ಯಭೂಮಿ ಆಗಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. ‘ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ವಿಷ್ಣುವರ್ಧನ್ ಫ್ಯಾನ್ಸ್ ಹೇಳಿದ್ದಾರೆ.
ವಿಷ್ಣುವರ್ಧನ್ (Vishnuvardhan) ಸ್ಮಾರಕವನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಹಾಗಾಗಿ ಅಭಿಮಾನ್ ಸ್ಟುಡಿಯೋ (Abhiman Studio) ಬಳಿ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಅದೇ ಜಾಗದಲ್ಲಿ ವಿಷ್ಣುವರ್ಧನ್ ಅವರ ಪುಣ್ಯಭೂಮಿ ಆಗಬೇಕು ಎಂದು ಫ್ಯಾನ್ಸ್ ಒತ್ತಾಯ ಮಾಡಿದ್ದಾರೆ. ‘ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಿದ್ದು ಸರಿಯಲ್ಲ. ಇದರಿಂದ ಕೋಟ್ಯಂತರ ಅಭಿಮಾನಿಗಳಿಗೆ ನೋವು ಉಂಟುಮಾಡಲಾಗಿದೆ. ನಮ್ಮ ಹೋರಾಟ ನಿಲ್ಲುವುದಿಲ್ಲ. ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ’ ಎಂದು ವಿಷ್ಣುವರ್ಧನ್ ಅವರ ಅಭಿಮಾನಿಗಳು (Vishnuvardhan Fans) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
