ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್

Updated on: Aug 11, 2025 | 4:38 PM

ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ. ಈ ವಿಚಾರದಲ್ಲಿ ನ್ಯಾಯ ಕೊಡಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಯತ್ನಿಸಿಲ್ಲ ಎಂದು ವಿಷ್ಣು ಅಭಿಮಾನಿಗಳು ಆರೋಪಿಸಿದ್ದಾರೆ. ಇಂದು (ಆ.11) ವಾಣಿಜ್ಯ ಮಂಡಳಿಗೆ ವಿಷ್ಣುವರ್ಧನ್ ಫ್ಯಾನ್ಸ್ ಮುತ್ತಿಗೆ ಹಾಕಿದ್ದಾರೆ. ಮಂಡಳಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಅವರ ಸಮಾಧಿ (Vishnuvardhan Samadhi) ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ. ಈ ವಿಚಾರದಲ್ಲಿ ನ್ಯಾಯ ಕೊಡಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಪ್ರಯತ್ನಿಸಿಲ್ಲ ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆರೋಪಿಸಿದ್ದಾರೆ. ಇಂದು (ಆಗಸ್ಟ್ 11) ವಾಣಿಜ್ಯ ಮಂಡಳಿಗೆ ವಿಷ್ಣು ಫ್ಯಾನ್ಸ್ ಮುತ್ತಿಗೆ ಹಾಕಿದ್ದಾರೆ. ಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು. ‘ಫಿಲ್ಮ್ ಚೇಂಬರ್ ಏನು ಮಾಡುತ್ತಿದೆ’ ಎಂದು ಅಭಿಮಾನಿಗಳು ಪ್ರಶ್ನಿಸಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More