Vishnuvardhan Smaraka: ವಿಷ್ಣುವರ್ಧನ್​ ಸ್ಮಾರಕ ಲೋಕಾರ್ಪಣೆಗೆ ಸಾವಿರ ವಾಹನಗಳ ಜಾಥಾ; ಹೇಗಿರಲಿದೆ ಕಾರ್ಯಕ್ರಮ?

Updated on: Jan 27, 2023 | 9:38 PM

Vishnuvardhan Memorial | Veerakaputra Srinivasa: ವಿಷ್ಣು ಸ್ಮಾರಕ ಉದ್ಘಾಟನಾ ಸಮಾರಂಭದ ಪ್ರಯುಕ್ತ ಅಭಿಮಾನಿಗಳು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಬಗ್ಗೆ ವೀರಕಪುತ್ರ ಶ್ರೀನಿವಾಸ್​ ಮಾತನಾಡಿದ್ದಾರೆ.

‘ಸಾಹಸ ಸಿಂಹ’ ವಿಷ್ಣುವರ್ಧನ್​ ಅವರ ಸ್ಮಾರಕ (Vishnuvardhan Memorial) ನಿರ್ಮಾಣ ಆಗಿದೆ. ಮೈಸೂರಿನ ಎಚ್​.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಜನವರಿ 29ರಂದು ಬೆಳಗ್ಗೆ 11 ಗಂಟೆಗೆ ವಿಷ್ಣುವರ್ಧನ್​ ಸ್ಮಾರಕ ಲೋಕಾರ್ಪಣೆಗೊಳ್ಳಲಿದೆ. ಇದನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು (Vishnuvardhan Fans) ಕಾದಿದ್ದಾರೆ. ಈ ಸಲುವಾಗಿ ವಿಷ್ಣುವರ್ಧನ್​ ಅಭಿಮಾನಿ ಸಂಘಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಬೆಂಗಳೂರಿನಿಂದ ಮೈಸೂರಿನ ತನಕ 1000 ವಾಹನಗಳಲ್ಲಿ ಜಾಥಾ ಹೊರಡಲಾಗುತ್ತದೆ ಎಂದು ವೀರಕಪುತ್ರ ಶ್ರೀನಿವಾಸ್​ (Veerakaputra Srinivasa) ಹೇಳಿದ್ದಾರೆ. ಅಂದಿನ ಒಟ್ಟಾರೆ ಕಾರ್ಯಕ್ರಮ ಹೇಗಿರಲಿದೆ ಎಂಬ ಬಗ್ಗೆ ಅವರು ಹಂಚಿಕೊಂಡ ಮಾಹಿತಿ ಈ ವಿಡಿಯೋದಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Jan 27, 2023 09:38 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More