ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ಸಮಾಧಿಯನ್ನು ಇತ್ತೀಚೆಗೆ ರಾತ್ರೋರಾತ್ರಿ ಧ್ವಂಸ ಮಾಡಲಾಗಿತ್ತು. ಆದರೆ ಈ ವಿಚಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೌನ ತಾಳಿದೆ ಎಂದು ವಿಷ್ಣು ಫ್ಯಾನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಟ ವಿಷ್ಣುವರ್ಧನ್ ಅವರ ಸಮಾಧಿ (Vishnuvardhan Samadhi) ಧ್ವಂಸ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ಸಮಾಧಿಯನ್ನು ಇತ್ತೀಚೆಗೆ ರಾತ್ರೋರಾತ್ರಿ ನೆಲಸಮ ಮಾಡಲಾಗಿತ್ತು. ಆದರೆ ಈ ವಿಚಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಮೌನ ತಾಳಿದೆ ಎಂದು ಅಭಿಮಾನಿಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಎದುರು ವಿಷ್ಣುವರ್ಧನ್ ಅಭಿಮಾನಿಗಳು ಅಳಲು ತೋಡಿಕೊಂಡಿದ್ದಾರೆ. ‘ನಿಮ್ಮಿಂದಲೇ ನಮಗೆ ನ್ಯಾಯ ಸಿಗಬೇಕು’ ಎಂದು ಫ್ಯಾನ್ಸ್ ಹೇಳಿದ್ದಾರೆ. ಅವರಿಗೆ ಸಾ.ರಾ. ಗೋವಿಂದು (Sa Ra Govindu) ಭರವಸೆ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
