ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗ ಖರೀದಿ: ಸುದೀಪ್​ರ ಕೊಂಡಾಡಿದ ಅಭಿಮಾನಿಗಳು

Updated on: Aug 19, 2025 | 7:21 PM

Vishnuvaradhan: ಸುದೀಪ್ ಅವರು ವಿಷ್ಣು ಸ್ಮಾರಕ ನಿರ್ಮಾಣಕ್ಕೆಂದೇ ಕೆಂಗೇರಿ ಬಳಿ ಜಾಗ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲಿ ಸ್ಮಾರಕ ನಿರ್ಮಾಣ ಕಾರ್ಯ ನಡೆಯಲಿದೆ. ಸುದೀಪ್ ಅವರು ಮಾಡುತ್ತಿರುವ ಈ ಕಾರ್ಯಕ್ಕೆ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದು, ಸುದೀಪ್ ಅವರನ್ನು ಕೊಂಡಾಡುತ್ತಿದ್ದಾರೆ.

ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್ (Vishnuvardhan) ಸ್ಮಾರಕವನ್ನು ಬಾಲಣ್ಣ ಕುಟುಂಬಸ್ಥರು ನೆಲಸಮಗೊಳಿಸಿದ್ದಾರೆ. ಇದು ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ನಟ ಸುದೀಪ್ ಸಹ ತೀವ್ರವಾಗಿ ಖಂಡಿಸಿದ್ದರು. ಇದೀಗ ಸುದೀಪ್ ಅವರು ವಿಷ್ಣು ಸ್ಮಾರಕ ನಿರ್ಮಾಣಕ್ಕೆಂದೇ ಕೆಂಗೇರಿ ಬಳಿ ಜಾಗ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲಿ ಸ್ಮಾರಕ ನಿರ್ಮಾಣ ಕಾರ್ಯ ನಡೆಯಲಿದೆ. ಸುದೀಪ್ ಅವರು ಮಾಡುತ್ತಿರುವ ಈ ಕಾರ್ಯಕ್ಕೆ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದು, ಸುದೀಪ್ ಅವರನ್ನು ಕೊಂಡಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 19, 2025 07:08 PM