AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠದ ಅಂಗಳ ತಲುಪಿದ ಹೆಚ್​​​ಡಿಕೆ-ಡಿಕೆಶಿ ಜಟಾಪಟಿ: ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ

ಮಠದ ಅಂಗಳ ತಲುಪಿದ ಹೆಚ್​​​ಡಿಕೆ-ಡಿಕೆಶಿ ಜಟಾಪಟಿ: ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ

ಪ್ರಸನ್ನ ಗಾಂವ್ಕರ್​
| Edited By: |

Updated on: Nov 20, 2026 | 4:54 PM

Share

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಿನ ಜಟಾಪಟಿ ಮಠದ ಅಂಗಳ ತಲುಪಿದೆ. ಹೌದು...ಒಕ್ಕಲಿಗ ಪ್ರಭಾವಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ಬಗ್ಗೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಮಠದ ನಿಶ್ಚಲಾನಂದ ಸ್ವಾಮೀಜಿ ಪ್ರಸ್ತಾಪಿಸಿದ್ದು, ಡಿಕೆ ಶಿವಕುಮಾರ್ ಸಿಎಂ ಆಗಿ ಕೆಲಸ ಮಾಡುತ್ತಿರುವಾಗ ತೊಂದರೆ ಕೊಡುತ್ತಿದ್ದಾರೆ. ಪರೋಕ್ಷವಾಗಿ ಕುಮಾರಸ್ವಾಮಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ನವೆಂಬರ್ 20): ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಿನ ಜಟಾಪಟಿ ಮಠದ ಅಂಗಳ ತಲುಪಿದೆ. ಹೌದು…ಒಕ್ಕಲಿಗ ಪ್ರಭಾವಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ಬಗ್ಗೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಮಠದ ನಿಶ್ಚಲಾನಂದ ಸ್ವಾಮೀಜಿ ಪ್ರಸ್ತಾಪಿಸಿದ್ದು, ಡಿಕೆ ಶಿವಕುಮಾರ್ ಸಿಎಂ ಆಗಿ ಕೆಲಸ ಮಾಡುತ್ತಿರುವಾಗ ತೊಂದರೆ ಕೊಡುತ್ತಿದ್ದಾರೆ. ಪರೋಕ್ಷವಾಗಿ ಕುಮಾರಸ್ವಾಮಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಸುಮ್ಮನೆ ಬಿಡುತ್ತಿಲ್ಲ ಆಡಳಿತ ಮಾಡಲಿಕ್ಕೆ. ಅವರ ಮನಸ್ಸು ನೋಯಿಸುವಂತ ಕೆಲಸ ಮಾಡುತ್ತಿದ್ದಾರೆ. ಇದನ್ನು ಸಮುದಾಯದ ಜನಾಂಗ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಬೆಂಗಳೂರಿನ ಲಗ್ಗೆರೆಯಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿಶ್ಚಲಾನಂದ ಸ್ವಾಮೀಜಿ , ಡಿಕೆ ಶಿವಕುಮಾರ್ ಸಿಎಂ ಆಗಿ ಕೆಲಸ ಮಾಡುತ್ತಿರುವಾಗ ತೊಂದರೆ ಕೊಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡುತ್ತಿಲ್ಲ. ಸಿಎಂ ಕೆಲಸ ಮಾಡಲು ಈ ಸಮುದಾಯವರು ಫ್ರೀ ಆಗಿ ಬಿಟ್ಟುಬಿಡಿ. ತಪ್ಪು ಮಾಡಿದರೆ ಟೀಕೆ ಮಾಡಿ, ಶಾಸಕಾಂಗ ಇದೆ, ಅಲ್ಲಿ ಟೀಕೆ ಮಾಡಿ. ದೂರದೃಷ್ಟಿ ಇಟ್ಟುಕೊಂಡು ಒಂದಷ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಒಂದು ಅಪರೂಪದಲ್ಲಿ ಅಧಿಕಾರ ಪಡೆದುಕೊಂಡಾಗ ಸಲಹೆ ಕೊಡಬೇಕು. ಸಿಎಂ ಡಿಕೆಶಿ ಕೆಲಸ ಮಾಡುವುದಕ್ಕೆ ಸುಗಮದ ದಾರಿಯನ್ನು ಬಿಡಬೇಕು.ಕೆಂಪೇಗೌಡರ ಜನ್ಮದಿನೋತ್ಸವ ದಿನ 15 ಲಕ್ಷ ಸಸಿಗಳನ್ನು ಹಾಕಿಸಿದ್ದಾರೆ. ಹೊಸ ಹೊಸ ಯೋಜನೆಗಳಿಗೆ ನಾವು ಸೂಕ್ತ ಸಲಹೆಗಳನ್ನು ಕೊಡಬೇಕು. ಆಗ ಬೆಂಗಳೂರು ಬೆಳೆಸಲು ಈ ಸಿಎಂ ಕೈಯಲ್ಲಿ ಕೂಡ ಸಾಧ್ಯ ಆಗುತ್ತೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More