ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಒಕ್ಕಲಿಗ ನಾಯಕರ ಮನವಿ
ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯಕ್ಕೆ ನಿಂದನೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮತ್ತು ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಗಳ ತನಿಖೆ ನಡೆಸಲು ಎಸ್ಐಟಿ ರಚಿಸಿ ಎಂದು ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಇಂದು (ಸೆ.20) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿತು. ಈ ವೇಳೆ ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಮನವಿ ಸಲ್ಲಿಸಿತು. ಬಿಜೆಪಿ ಶಾಸಕ ಮುನಿರತ್ನ (Munirathna) ಅವರು ಒಕ್ಕಲಿಗ ಸಮುದಾಯಕ್ಕೆ ನಿಂದನೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮತ್ತು ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಮಾಡಿರುವ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 20, 2024 11:59 AM