Rahul Gandhi Vote Adhikaar Rally Live: ರಾಹುಲ್ ಗಾಂಧಿ ನೇತೃತ್ವದಲ್ಲಿ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ದ ನೇರಪ್ರಸಾರ
ಮತಗಳ್ಳತನದ ಆರೋಪದ ಮೇಲೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಲೋಸಭೆ ವಿರೋಧ ಪಕ್ಷದ ನಾಯಕ ಸಮರ ಸಾರಿದ್ದಾರೆ. ಈಗಾಗಲೇ ಗುರುವಾರ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 1,00,250 ಮತಗಳನ್ನು ಅಕ್ರಮವಾಗಿ ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಈಗಾಗಲೇ ಆರೋಪ ಮಾಡಿದ್ದಾರೆ. ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ.
ಬೆಂಗಳೂರು, (ಆಗಸ್ಟ್ 08) : ಮತಗಳ್ಳತನದ ಆರೋಪದ ಮೇಲೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಲೋಸಭೆ ವಿರೋಧ ಪಕ್ಷದ ನಾಯಕ ಸಮರ ಸಾರಿದ್ದಾರೆ. ಈಗಾಗಲೇ ಗುರುವಾರ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 1,00,250 ಮತಗಳನ್ನು ಅಕ್ರಮವಾಗಿ ಸೇರಿಸಲಾಗಿದೆ ಎಂದು ರಾಹುಲ್ ಗಾಂಧಿ ಈಗಾಗಲೇ ಆರೋಪ ಮಾಡಿದ್ದಾರೆ. ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ತಮ್ಮ ಆರೋಪದಲ್ಲಿ ಮತದಾರರ ಪಟ್ಟಿಯಲ್ಲಿ ಒಬ್ಬನೇ ವ್ಯಕ್ತಿಯ ಹೆಸರು ಮತ್ತು ವಿವರಗಳು ಹಲವು ಬಾರಿ ಕಾಣಿಸಿಕೊಂಡಿದೆ. ಅಂತವರು 11,965 ಪತ್ತೆಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆದಿದ್ದು, ಇದರ ನೇರಪ್ರಸಾರ ಇಲ್ಲಿದೆ.

