ಕೇಂದ್ರ ಚುನಾವಣಾ ಆಯುಕ್ತರನ್ನ ಪುಢಾರಿ ಎಂದು ಕರೆದ ಯತೀಂದ್ರ ಸಿದ್ದರಾಮಯ್ಯ

Updated on: Oct 28, 2025 | 5:44 PM

ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಫುಡಾರಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿನಲ್ಲಿಂದು 'ವೋಟ್‌ ಚೋರ್‌ ಗದ್ದಿ ಛೋಡೊ' ಅಭಿಯಾನದ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯತೀಂದ್ರ, ರಾಹುಲ್ ಗಾಂಧಿ ಅವರು ಮತಗಳ್ಳತನವನ್ನು ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ.ಆದರೆ ಚುನಾವಣಾ ಆಯುಕ್ತರು ರಾಹುಲ್ ಗಾಂಧಿಯವರ ತೇಜೋವಧೆ ಮಾಡುತ್ತಿದ್ದಾರೆ. ರಾಜಕೀಯ ಪುಢಾರಿ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೈಸೂರು, (ಅಕ್ಟೋಬರ್ 28): ಕರ್ನಾಟಕ ಕಾಂಗ್ರೆಸ್‌ನಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ ಜೋರಾಗಿದೆ. ಅದರಲ್ಲೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ನೀಡಿರುವ ಉತ್ತರಾಧಿಕಾರಿ ಹೇಳಿಕೆ ಕಾಂಗ್ರೆಸ್​​ನಲ್ಲಿ ಹಲ್​ ಚಲ್​ ಎಬ್ಬಿಸಿದೆ. ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಿಕಿಹೊಳಿ ಎಂದುಯತೀಂದ್ರ ಸ್ಫೋಟಕ ಹೇಳಿಕೆ ಸಂಚಲನ ಸೃಷ್ಟಿಸಿದೆ. ಇದರೊಂದಿಗೆ ಸಿದ್ದರಾಮಯ್ಯ ತಮ್ಮ ಪುತ್ರನ ಮೂಲಕ ಉತ್ತರಾಧಿಕಾರಿಯ ದಾಳ ಉರುಳಿಸಿದ್ದಾರಾ? ಎಂಬ ಚರ್ಚೆಗಳು ಶುರುವಾಗಿವೆ. ಈ ನಡುವೆ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಹೌದು… ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಫುಡಾರಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿನಲ್ಲಿಂದು ‘ವೋಟ್‌ ಚೋರ್‌ ಗದ್ದಿ ಛೋಡೊ’ ಅಭಿಯಾನದ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯತೀಂದ್ರ, ರಾಹುಲ್ ಗಾಂಧಿ ಅವರು ಮತಗಳ್ಳತನವನ್ನು ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ.ಆದರೆ ಚುನಾವಣಾ ಆಯುಕ್ತರು ರಾಹುಲ್ ಗಾಂಧಿಯವರ ತೇಜೋವಧೆ ಮಾಡುತ್ತಿದ್ದಾರೆ. ರಾಜಕೀಯ ಪುಢಾರಿ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.