ವೃಥಾ ಆರೋಪ ಮಾಡುವ ಮೂಲಕ ಕಾಂಗ್ರೆಸ್ ವೈಚಾರಿಕ ದಿವಾಳಿತನ ಪ್ರದರ್ಶಿಸುತ್ತಿದೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
ಅಷ್ಟಕ್ಕೂ ಒಂದು ಸಮಗ್ರ ತನಿಖೆಯನ್ನು ನಡೆಸುವಂತೆ ಬಿ ಬಿ ಎಮ್ ಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆ ಸಂದರ್ಭದಲ್ಲಿ ನಡೆದಿರುವ ಅಕ್ರಮ ಮತ್ತು ತಮ್ಮ ನಡುವೆ ಯಾವುದೇ ಸಂಬಂಧವಿಲ್ಲ, ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಕಾಂಗ್ರೆಸ್ (Congress) ತನ್ನ ವೈಚಾರಿಕ ದಿವಾಳಿತನ ಪ್ರದರ್ಶಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರಲ್ಲಿ ಇಂದು ಹೇಳಿದರು. ಅಸಲಿಗೆ ಇದು ಚುನಾವಣಾ ಅಯೋಗ (Election Commission) ಮತ್ತು ವೋಟರ್ ಐಡಿ ಪರಿಷ್ಕರಣೆಯ ಜವಾಬ್ದಾರಿಯನ್ನು ನೀಡಲಾಗಿದ್ದ ಸರ್ಕಾರೇತರ ಸಂಸ್ಥೆಗಳ ನಡುವಿನ ವಿಚಾರ, ಅಷ್ಟಕ್ಕೂ ಒಂದು ಸಮಗ್ರ ತನಿಖೆಯನ್ನು ನಡೆಸುವಂತೆ ಬಿಬಿಎಮ್ ಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
Latest Videos