AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಸುರೇಶ ನಾಯಕ
| Edited By: |

Updated on: Apr 22, 2026 | 4:17 PM

Share

ಬೀದರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ಖರ್ಗೆಗೆ ವ್ಯತ್ಯಾಸ ತಿಳಿಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಬೀದರ್​, ಏಪ್ರಿಲ್​​ 22: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಮ್ಮ ಮತ್ತು ಖರ್ಗೆ ಅವರ ದೃಷ್ಟಿಕೋನದಲ್ಲಿ ಸಣ್ಣ ಬದಲಾವಣೆ ಇದೆ ಅನಿಸುತ್ತೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಳಿ ಹಾಗೂ ಕಪ್ಪು ನಡುವಿನ ವ್ಯತ್ಯಾಸ ಇಲ್ಲ. ಅದೇ ರೀತಿ ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ವ್ಯತ್ಯಾಸವಿಲ್ಲದಂತೆ ಕಾಣುತ್ತೆ. ಅದನ್ನು ಬಿಟ್ಟರೆ ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ರಾಧಾಕೃಷ್ಣನ್ ಹೇಳಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ನಡೆದ ಡಾ.ಬಸವಲಿಂಗ ಪಟ್ಟದೇವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪರಾಷ್ಟ್ರಿಪತಿಗಳು ಈ ರೀತಿ ಹೇಳಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More