Video: ಇಂಡಿ ಒಕ್ಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ ಇಂಡಿ ಒಕ್ಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ರೆಡ್ಡಿ ನಾಮಪತ್ರ ಸಲ್ಲಿಸಿದರು. ಇದಲ್ಲದೆ, ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವತ್ ಮತ್ತು ಪ್ರಿಯಾಂಕಾ ಚತುರ್ವೇದಿ, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಅಲ್ಲಿ ಹಾಜರಿದ್ದರು.
ನವದೆಹಲಿ, ಆಗಸ್ಟ್ 21: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ ಇಂಡಿ ಒಕ್ಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ರೆಡ್ಡಿ ನಾಮಪತ್ರ ಸಲ್ಲಿಸಿದರು. ಇದಲ್ಲದೆ, ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವತ್ ಮತ್ತು ಪ್ರಿಯಾಂಕಾ ಚತುರ್ವೇದಿ, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಅಲ್ಲಿ ಹಾಜರಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ