Will BJP MLC join Congress now? ಹೆಚ್ ವಿಶ್ವನಾಥ್ ಮೈಸೂರು ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ, ಚಹಾ ಸೇವನೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 16, 2023 | 4:32 PM

ಗುರುವಾರ ಮೈಸೂರು ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವಿಶ್ವನಾಥ್​ರವರ ನಿವಾಸಕ್ಕೆ ತೆರಳಿ ಚಹಾ ಸೇವಿಸಿದರು

ಮೈಸೂರು: ಈಗಲೂ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿದಿರುವ ಹೆಚ್ ವಿಶ್ವನಾಥ್ (H Vishwanath) ಅವರು ವಾಪಸ್ಸು ಕಾಂಗ್ರೆಸ್ ಹೋಗುವುದದು ಖಚಿತವಾಗಿದೆ. ಸಿದ್ದರಾಮಯ್ಯ (Siddaramaiah) ಸೇರಿದಂತೆ ರಾಜ್ಯದ ಹಲವಾರು ಪ್ರಮುಖ  ನಾಯಕರೊಂದಿಗೆ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ವಿದ್ಯುಕ್ತವಾಗಿ ಅವರಿನ್ನು ಬಿಜೆಪಿಗೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಪಕ್ಷ ಸೇರಿಲ್ಲ. ಗುರುವಾರ ಮೈಸೂರು ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ವಿಶ್ವನಾಥ್ ನಿವಾಸಕ್ಕೆ ತೆರಳಿ ಚಹಾ ಸೇವಿಸಿದರು. ನಗರದ ಕೆ ಆರ್ ನಗರದಲ್ಲಿ ವಿಶ್ವನಾಥ್ ಅವರ ಮನೆಯಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.