ವಕ್ಫ್ ಪ್ರತಿಭಟನೆ; ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳು ಇಂದು ತೀವ್ರಗೊಂಡಿದ್ದು, ಮುರ್ಷಿದಾಬಾದ್ ಜಿಲ್ಲೆಯಿಂದ 110ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಪೊಲೀಸರು ಸುತಿ ಮತ್ತು ಸಂಸರ್‌ಗಂಜ್‌ನಂತಹ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಗಸ್ತು ತಿರುಗಿದ್ದಾರೆ. ಬಂಗಾಳದ ಜಂಗಿಪುರ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಹಿಂಸಾತ್ಮಕ ಘಟನೆಗಳು ನಡೆದಿರುವುದರಿಂದ ಬಂಗಾಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪೊಲೀಸ್ ವ್ಯಾನ್‌ಗಳು ಸೇರಿದಂತೆ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಯಿತು.
ಕೊಲ್ಕತ್ತಾ, ಏಪ್ರಿಲ್ 12: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಇಂದು 110ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಸಂಸತ್ತಿನಲ್ಲಿ ಅಂಗೀಕರಿಸಲಾದ ಇತ್ತೀಚಿನ ವಕ್ಫ್ ಕಾಯ್ದೆಯ (Waqf Act) ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಬಂಗಾಳದ ಜಂಗಿಪುರ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಹಿಂಸಾತ್ಮಕ ಘಟನೆಗಳು ನಡೆದಿರುವುದರಿಂದ ಬಂಗಾಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪೊಲೀಸ್ ವ್ಯಾನ್‌ಗಳು ಸೇರಿದಂತೆ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 12, 2025 03:12 PM
Latest Videos