ಪಹಣಿಯಲ್ಲಿ ವಕ್ಫ್ ಹೆಸರು: ಜಿಲ್ಲಾಧಿಕಾರಿ ಕಚೇರಿ ಎದುರು ವಿಜಯಪುರ ರೈತರ ಪ್ರತಿಭಟನೆ
Vijayapura Waqf Raw: ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದು ಮಾಡಿದ ಕಂದಾಯ ಇಲಾಖೆ ವಿರುದ್ಧ ವಿಜಯಪುರ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳು ತಿಳವಳಿಕೆ ಪತ್ರ ನೀಡದೇ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಜಯಪುರ, ಅಕ್ಟೋಬರ್ 26: ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ (Vijayapura Waqf Board) ಎಂದು ನಮೂದು ಮಾಡಿದ ಕಂದಾಯ ಇಲಾಖೆ ವಿರುದ್ಧ ವಿಜಯಪುರ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳು ತಿಳವಳಿಕೆ ಪತ್ರ ನೀಡದೇ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರು ಪ್ರತಿಭಟನೆ ನಡೆಸಿದರು. ವಕ್ಫ್ ಬೋರ್ಡ್ ನಮೂದಾಗುವ ಮುಂಚಿನ ಹಾಗೂ ವಕ್ಫ್ ನಮೂದಾದ ಪಹಣಿ ಪತ್ರ ಹಿಡಿದು ಮೌನ ಪ್ರತಿಭಟನೆ ನಡೆಸಿದರು. ವಕ್ಫ್ ಎಂದು ನಮೂದಾಗಿದ್ದನ್ನು ತೆಗೆಯಬೇಕೆಂದು ಒತ್ತಾಯಿಸಿದರು.
1954ರಲ್ಲಿ ಜವಾಹರ ಲಾಲ್ ನೆಹರು ಅವರು ಪ್ರಧಾನಿಯಾಗಿದ್ದಾಗ ವಕ್ಫ್ ಕಾಯ್ದೆಯನ್ನು ಲೋಕಸಭೆಯಲ್ಲಿ ಜಾರಿ ಮಾಡಿದರು. 1995ರಲ್ಲಿ ನರಸಿಂಹರಾವ್ ಪ್ರಧಾನಿಯಾಗಿದ್ದ ವೇಳೆ ವಕ್ಫ್ಗೆ ಹೆಚ್ಚಿನ ಅಧಿಕಾರ ನೀಡಿದರು. 2013ರಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಂಪೂರ್ಣ ಸ್ವಾಯತ್ತತೆ ನೀಡಿದರು. ವಕ್ಫ್ ನಡೆಯನ್ನು ಯಾರೂ ಪ್ರಶ್ನೆ ಮಾಡದಂತೆ ಕಾಯ್ದೆ ಜಾರಿ ಮಾಡಿದರು.
ವಕ್ಫ್ ಬೋರ್ಡ್ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲೂ ಪ್ರಶ್ನೆ ಮಾಡದಂತೆ ನಿಯಮ ಮಾಡಿದರು. ಇದರಿಂದ ನಾವು ವಕ್ಫ್ ಟ್ರಿಬ್ಯೂನಲ್ ಮುಂದೆ ಹೋಗುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ವಿಜಯಪುರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಹೆಸರು: ಕಂಗಾಲಾದ ಅನ್ನದಾತ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ