ಪಹಣಿಯಲ್ಲಿ ವಕ್ಫ್​​ ಹೆಸರು: ಜಿಲ್ಲಾಧಿಕಾರಿ ಕಚೇರಿ ಎದುರು ವಿಜಯಪುರ ರೈತರ ಪ್ರತಿಭಟನೆ

Edited By: ವಿವೇಕ ಬಿರಾದಾರ

Updated on: Oct 26, 2024 | 12:46 PM

Vijayapura Waqf Raw: ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​​ ಬೋರ್ಡ್ ಎಂದು ನಮೂದು ಮಾಡಿದ ಕಂದಾಯ‌ ಇಲಾಖೆ ವಿರುದ್ಧ ವಿಜಯಪುರ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳು ತಿಳವಳಿಕೆ ಪತ್ರ ನೀಡದೇ ರೈತರ ಪಹಣಿಯಲ್ಲಿ ವಕ್ಫ್​ ಬೋರ್ಡ್ ಎಂದು ನಮೂದು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಜಯಪುರ, ಅಕ್ಟೋಬರ್ 26: ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​​ ಬೋರ್ಡ್ (Vijayapura Waqf Board) ಎಂದು ನಮೂದು ಮಾಡಿದ ಕಂದಾಯ‌ ಇಲಾಖೆ ವಿರುದ್ಧ ವಿಜಯಪುರ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳು ತಿಳವಳಿಕೆ ಪತ್ರ ನೀಡದೇ ರೈತರ ಪಹಣಿಯಲ್ಲಿ ವಕ್ಫ್​ ಬೋರ್ಡ್ ಎಂದು ನಮೂದು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರು ಪ್ರತಿಭಟನೆ ನಡೆಸಿದರು. ವಕ್ಫ್​ ಬೋರ್ಡ್ ನಮೂದಾಗುವ ಮುಂಚಿನ ಹಾಗೂ ವಕ್ಫ್​ ನಮೂದಾದ ಪಹಣಿ ಪತ್ರ ಹಿಡಿದು ಮೌನ ಪ್ರತಿಭಟನೆ ನಡೆಸಿದರು. ವಕ್ಫ್​ ಎಂದು ನಮೂದಾಗಿದ್ದನ್ನು ತೆಗೆಯಬೇಕೆಂದು ಒತ್ತಾಯಿಸಿದರು.

1954ರಲ್ಲಿ ಜವಾಹರ ಲಾಲ್ ನೆಹರು ಅವರು ಪ್ರಧಾನಿಯಾಗಿದ್ದಾಗ ವಕ್ಫ್​ ಕಾಯ್ದೆಯನ್ನು ಲೋಕಸಭೆಯಲ್ಲಿ ಜಾರಿ ಮಾಡಿದರು. 1995ರಲ್ಲಿ ನರಸಿಂಹರಾವ್ ಪ್ರಧಾನಿಯಾಗಿದ್ದ ವೇಳೆ ವಕ್ಫ್​ಗೆ ಹೆಚ್ಚಿನ ಅಧಿಕಾರ ನೀಡಿದರು. 2013ರಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಂಪೂರ್ಣ ಸ್ವಾಯತ್ತತೆ ನೀಡಿದರು. ವಕ್ಫ್​ ನಡೆಯನ್ನು ಯಾರೂ ಪ್ರಶ್ನೆ ಮಾಡದಂತೆ ಕಾಯ್ದೆ ಜಾರಿ ಮಾಡಿದರು.

ವಕ್ಫ್​ ಬೋರ್ಡ್ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲೂ ಪ್ರಶ್ನೆ ಮಾಡದಂತೆ ನಿಯಮ ಮಾಡಿದರು. ಇದರಿಂದ ನಾವು ವಕ್ಫ್​ ಟ್ರಿಬ್ಯೂನಲ್ ಮುಂದೆ ಹೋಗುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್​ ಹೆಸರು: ಕಂಗಾಲಾದ ಅನ್ನದಾತ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More