ವಕ್ಫ್ ಜಮೀನು ವಿವಾದ; ರೈತರಿಗೆ ನೀಡಿದ ನೋಟೀಸ್​ಗಳನ್ನು ವಾಪಸ್ಸು ಪಡೆಯುತ್ತೇವೆ: ಶಿವಕುಮಾರ್

|

Updated on: Oct 30, 2024 | 1:32 PM

ಉಚ್ಛ ನ್ಯಾಯಾಲಯವು ಚಿತ್ರನಟ ದರ್ಶನ್​ಗೆ ಷರತ್ತುಬದ್ಧ ಜಾಮೀನು ನೀಡಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ನ್ಯಾಯಾಲಯದ ತೀರ್ಪನ್ನು ತಾನು ಪ್ರಶ್ನಿಸುವ ಕೆಲಸ ತಾನು ಮಾಡಲ್ಲ, ನ್ಯಾಯಾಲಯದ ತೀರ್ಪನ್ನು ತಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದು ಹೇಳಿದರು.

ಬೆಂಗಳೂರು: ವಕ್ಫ್ ಬೋರ್ಡ್ ಜಮೀನು ಮತ್ತು ರೈತರಿಗೆ ನೀಡಿದ ನೋಟೀಸ್​ಗಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಮತ್ತು ಕಂದಾಯ ಸಚಿವ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ, ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ರೈತರಿಗೆ ನೋಟೀಸ್​ಗಳನ್ನು ನೀಡಲಾಗಿತ್ತು, ಈಗ ತಮ್ಮ ಸರ್ಕಾರ ನೀಡಿರುವ ನೋಟೀಸ್​ಗಳನ್ನು ವಾಪಸ್ಸು ಪಡೆಯಲಾಗುವುದು, ರೈತರ ಜಮೀನುಗಳಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಉದ್ದೇಶಪೂರ್ವಕವಾಗಿ ಅನುದಾನ ಬಿಡುಗಡೆ ಮಾಡಿಲ್ಲ: ಶಿವಕುಮಾರ್

Published On - 1:32 pm, Wed, 30 October 24

Follow us on